ಕ್ರೈಂ
ಮಹಾರಾಷ್ಟ್ರ; ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಠಾಣೆ (ಮಹಾರಾಷ್ಟ್ರ): ಠಾಣೆ ಜಿಲ್ಲೆಯ ಡೊಂಬಿವಿಲಿ ಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಈ ಅಪರಾಧದದಲ್ಲಿ ಎಷ್ಟು ಜನರು ಭಾಗಿಯಾದ್ದಾರೆ ಎಂಬುದು ತಕ್ಷಣಕ್ಕೆ ತಿಳಿದಿಲ್ಲ. ಆದರೆ, ಕಲ್ಯಾಣ್‌ನ ಡೊಂಬಿವಿಲಿಯಲ್ಲಿರುವ ಮನಪಾಡಾ ಪೊಲೀಸರು ಬುಧವಾರ ರಾತ್ರಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 376 (ಅತ್ಯಾಚಾರ) ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಕುರಿತು ಹೆಚ್ಚಿನ ವಿವರಗಳನ್ನು ಅಧಿಕಾರಿ ಬಹಿರಂಗಪಡಿಸಿಲ್ಲ. ಪೊಲೀಸರ ತಂಡಗಳು ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ಕೈಗೊಂಡಿವೆ.