ಮಾನಸಿಕ ಅಸ್ವಸ್ಥ ಕೇಂದ್ರಕ್ಕೆ ಆಹಾರ ಧಾನ್ಯ ವಿತರಣೆ

ಅಕ್ಷರ ದಾಸೋಹ ದಿನದ ಅಂಗವಾಗಿ ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ಥ ಕೇಂದ್ರಕ್ಕೆ ಆಹಾರ ಧಾನ್ಯ ವಿತರಣೆ
ಚಾಮರಾಜನಗರ: ನಗರದ ಪಾಲಿಟೆಕ್ನಿಕ್ ಕಾಲೇಜ್ ಮುಂಭಾಗ ಇರುವ ಮಾನಸದಾರೆ ಬುದ್ಧಿಮಾಂದ್ಯ ಮತ್ತು ಮಾನಸಿಕ ಅಸ್ವಸ್ಥರು ಹಾಗೂ ಹಿರಿಯ ನಾಗರಿಕರ ಆರೈಕೆ ಸಂಸ್ಥೆಗೆ ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿಯವರ 6ನೇ ವರ್ಷದ ದಾಸೋಹ ದಿನದ ಅಂಗವಾಗಿ ಸಮಾಜ ಸೇವಕರಾದ ಡಾ. ಪರಮೇಶ್ವರಪ್ಪ ಅವರು ಆಹಾರ ಧಾನ್ಯ ವಿತರಿಸಿದರು. ನಂತರ ಮಾತನಾಡಿದ ಅವರು ಬುದ್ಧಿಮಾಂದ್ಯತೆ ಹೊಂದಿರುವ ಜನರಿಗೆ ಮೂಲಭೂತ ಸೌಕರ್ಯಗಳ ಕೊರತೆ ಹೆಚ್ಚಾಗಿರುತ್ತದೆ ಆದ್ದರಿಂದ ಇಂತಹ ಮಹನೀಯರ ದಿನದ ಅಂಗವಾಗಿ ಇಂತಹ ಸಹಾಯ ನೀಡುತ್ತಿರುವುದು ನನಗೆ ತುಂಬಾ ಸಂತೋಷವಾಗಿದೆ ಇದೇ ರೀತಿ ಮುಂದಿನ ದಿನಗಳಲ್ಲೂ ಹೆಚ್ಚಿನ ಸಹಕಾರ ಮಾಡಲು ಮುಂದಾಗುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಎಚ್.ಎಂ.ಶಿವಣ್ಣ ಮಂಗಲ ಹೊಸೂರು, ಕರಿನಂಜನಪುರದ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರ್.ಡಿ.ಮಹೇಶ್, ಸಂಸ್ಥೆಯ ಮಹದೇವ್.ಎಂ.ಡಿ, ಸಿಬ್ಬಂದಿಗಳಾದ ಮಮತಾ, ಸೋನು, ಮಹೇಶ್ವರಿ, ನೀಲಮ್ಮ, ಗಿರೀಶ್ ಸೇರಿದಂತೆ ಇತರರಿದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ