ವಕ್ಫ್ ಸಮಸ್ಯೆ ಪರಿಹಾರಕ್ಕೆ ಬಿಜೆಪಿ ಪಟ್ಟು, ನ.22 ರಂದು ಧರಣಿ

ಚಾಮರಾಜನಗರ : ವಕ್ಫ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾ ಬಿಜೆಪಿ ಸಮಿತಿಯಿಂದ ಜಿಲ್ಲಾ ಕೇಂದ್ರದಲ್ಲಿ ನ.22ರಂದು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ರೈತರು, ಮಠಮಾನ್ಯಗಳು ಮತ್ತು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲಾಗುವುದು ಅಲ್ಲದೆ ಅವರ ಸಮಸ್ಯೆಯನ್ನು ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಹಾಗೂ ಅದರ ನೈಜ ವರದಿಯನ್ನು ಸದನದಲ್ಲಿ ಚರ್ಚಿಸುತ್ತೇವೆ. ವರ್ಕ್ ಆಸ್ತಿ ಸಂಬಂಧ ಇಡೀ ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿ ಸಮಸ್ಯೆ ಎದುರಾಗಿದೆ ಆ ಸಮಸ್ಯೆ ಬಗೆಹರಿಸಲು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ನೇತೃತ್ವದಲ್ಲಿ ತಂಡಗಳು ರಚನೆಯಾಗಿವೆ.ತಂಡಗಳ ರಚನೆಯ ಉದ್ದೇಶ ವಕ್ಫ್ ಆಸ್ತಿ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಶಕ್ತಿ ತುಂಬವುದಾಗಿದೆ. ವಕ್ಫ್ ಅದಾಲತ್ ಮಾಡಲು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಮೂಲಕ ವಿವಾದ ಶುರು ಮಾಡಿದವರೇ ಕಾಂಗ್ರೆಸ್ ನವರು. ಸುಮಾರು 16 ಸಾವಿರ ಎಕರೆ ಜಮೀನು ವಕ್ಫ್ ಮಂಡಳಿಗೆ ಸೇರಿದೆ ಇದರಿಂದ ರೈತರಿಗೆ ನೋಟಿಸು ಜಾರಿ ಮಾಡಿದ್ದಾರೆ ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ವಕ್ಫ್ ಆಸ್ತಿ ವಿವಾದ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ರಾಜಕೀಯ ಶುರು ಮಾಡಿದವರೇ ನೀವು.ನಾವು ಕೇಳಿದ್ದು ನೀವು ಯಾವ ಆಧಾರದ ಮೇಲೆ ರೈತರಿಗೆ ನೋಟಿಸು ನೀಡಿದ್ದೀರಾ? ಎಂದು ಇದು ತಪ್ಪಾ? ಆದ್ದರಿಂದ ನ್ಯಾಯ ದೊರೆಯುವ ತನಕ ನಮ್ಮ ಹೋರಾಟ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೇಂದ್ರ ಬರ ಪರಿಹಾರ ಸಮಿತಿಯ ಮಾಜಿ ಅಧ್ಯಕ್ಷ ಎಂ.ರಾಮಚಂದ್ರು, ಮುಖಂಡ ನೂರೊಂದು ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೂಡ್ನಾಕೂಡು ಪ್ರಕಾಶ್, ಜಿ.ಪಂ.ಮಾಜಿ ಸದಸ್ಯ ಬಾಲರಾಜು, ಜಿಲ್ಲಾ ವಕ್ತಾರ ಕಾಡಳ್ಳಿ ಕುಮಾರ್, ಜಿಲ್ಲಾ ಮಾಧ್ಯಮ ಪ್ರಮುಖ್ ವೀರೇಂದ್ರ ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ