ದೇಶ
: ರಾಜ್ಯದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ : ಸಚಿವ ಅಶ್ವತ್ಥ ನಾರಾಯಣ
ಬೆಂಗಳೂರು : ಇಂಜಿನಿಯರಿಂಗ್ ಸೇರಬಯಸುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಸಿಹಿಸುದ್ದಿ ನೀಡಿದ್ದು, ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಅಶ್ವತ್ಥ ನಾರಾಯಣ ಅವರು, ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ವರ್ಷ 20,000 ರೂ.ಗಿಂತ ಹೆಚ್ಚು ಶುಲ್ಕವನ್ನು ತೆಗೆದುಕೊಳ್ಳುವಂತಿಲ್ಲ. ಇತರೆ ಶುಲ್ಕಗಳ ಮಿತಿ 20 ಸಾವಿರ ನಿಗದಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.