Kiccha Sudeep: ಡಿಕೆ ಶಿವಕುಮಾರ್ ಮನೆಗೆ ದಿಢೀರ್ ಭೇಟಿ ಕೊಟ್ಟ ಕಿಚ್ಚ ಸುದೀಪ್: ಕಾರಣ ಏನು?

ಬೆಂಗಳೂರು ಫೆಬ್ರವರಿ 06: ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರನ್ನ ನಟ ಕಿಚ್ಚ ಸುದೀಪ್ ಅವರು ಸದಾಶಿವ ನಗರದ ನಿವಾಸದಲ್ಲಿ ದಿಢೀರ್ ಭೇಟಿಯಾಗಿರುವುದು ಅಚ್ಚರಿ ಮೂಡಿದಿದೆ.
ಮೊದಲಿನಿಂದಲೂ ಕಿಚ್ಚ ಸುದೀಪ್ ಅವರು ಹಲವು ರಾಜಕಾರಣಿಗಳ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಈ ನಡುವೆ ಇತ್ತೀಚೆಗೆ ನಟ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಟ ಸುದೀಪ್ ಮನೆಗೆ ಮತ್ತಷ್ಟು ಕುತೂಹಲವನ್ನುಂಟು ಮಾಡಿದೆ.ನಟ ಕಿಚ್ಚ ಸುದೀಪ್ ಅವರು ಡಿ ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿರುವ ಅಸಲಿ ಕಾರಣ ಏನು ಎನ್ನುವ ಪ್ರಶ್ನೆ ಉದ್ಭವಿಸಿದ್ದು, ಫೆಬ್ರವರಿ 8 ರಿಂದ ಬೆಂಗಳೂರಿನಲ್ಲಿ ಸಿಸಿಎಲ್ ಆರಂಭ ಆಗಲಿದೆ. ಇದರ ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್ ಅವರಿಗೆ ಸುದೀಪ್ ಆಹ್ವಾನ ನೀಡಿದ್ದಾರೆ.
ಹೀಗಾಗಿ, ಅವರು ಡಿ ಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ. ಫೆಬ್ರವರಿ 8 ಮತ್ತು 9 ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಸಿಎಲ್ ಪಂದ್ಯಗಳು ನಡೆಯಲಿದೆ. ಫೆಬ್ರವರಿ 8 ರಂದು ಕರ್ನಾಟಕ ಬುಲ್ಡೋಜರ್ ತಂಡದವರು ಹೈದರಾಬಾದ್ ವಿರುದ್ದ ಮೊದಲ ಪಂದ್ಯ ಆಡಲಿದ್ದಾರೆ.
ಫೆಬ್ರವರಿ 8 ಮತ್ತು 9ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯ ಕರ್ನಾಟಕದ ಮತ್ತು ಹೈದ್ರಾಬಾದ್ ನಡುವೆ ನಡೆಯಲಿದೆ. ಇನ್ನೂ ಅನೂಪ್ ಭಂಡಾರಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಈ ವೇಳೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮದ್ ಕೂಡ ನಟ ಸುದೀಪ್ ಕಾರಿನಲ್ಲೇ ತೆರಳಿದರು.
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ ಕೆ ಶಿವಕುಮಾರ್ ಅವರನ್ನ ಕಿಚ್ಚ ಸುದೀಪ್ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಈ ವೇಳೆ ಕಿಚ್ಚ ಸುದೀಪ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ಕಾಂಗ್ರೆಸ್ ಸೇರ್ಪಡೆ ಕುರಿತು ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ವು. ಈ ಕುರಿತು ನಟ ಕಿಚ್ಚ ಸುದೀಪ್ ಅವರು ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಮಾತನಾಡಿದ್ದರು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದಿಂದಲೂ ನನಗೆ ಪಕ್ಷ ಸರ್ಪಡೆ ಬಗ್ಗೆ ಒತ್ತಡವಿತ್ತು ಎಂದು ಹೇಳಿದ್ದರು.
ಇದೀಗ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಸದಾಶಿವ ನಗರದ ನಿವಾಸದಲ್ಲಿ ಕಿಚ್ಚ ಸುದೀಪ್ ಅವರು ಸೌಜನ್ಯ ಭೇಟಿಯಾಗಿದ್ದಾರೆ. ಈ ವೇಳೆ ಯಾವುದೇ ರಾಜಕೀಯ ವಿಷಯವನ್ನ ಚರ್ಚೆ ಮಾಡಿಲ್ಲ. ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ನಿವಾಸಕ್ಕೆ ನಲಪಾಡ್ ಕೂಡಾ ಆಗಮಿಸಿದ್ದಾರೆ. SIT ಬಿಟ್ ಕಾಯಿನ್ ಪ್ರಕರಣದ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಿದೆ. ಹೀಗಾಗಿ SIT ನೋಟಿಸ್ ಬೆನ್ನಲ್ಲೇ ಡಿ ಕೆ ಶಿವಕುಮಾರ್ ಭೇಟಿಗೆ ನಲಪಾಡ್ ಆಗಮಿಸಿದ್ದಾರೆ. ನೋಟಿಸ್ ಸಂಬಂದ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿರೋ ಸಾಧ್ಯತೆ ಇದೆ ಎನ್ನಲಾಗಿದೆ.