ದೇಶ

NEET ವಿರುದ್ಧದ ಹೋರಾಟಕ್ಕೆ ಸಿಎಂ ಸ್ಟಾಲಿನ್ ಹೊಸ ಅಸ್ತ್ರ..!

ಚೆನ್ನೈ (ಅಕ್ಟೋಬರ್​ 05); ವೈದ್ಯಕೀಯ ಶಿಕ್ಷಣ (MBBS) ಕ್ಷೇತ್ರದಲ್ಲಿ ರಾಜ್ಯಗಳಿಗಿದ್ದ ಹಕ್ಕು ಸ್ವಾಮ್ಯವನ್ನು ಕೇಂದ್ರ ಸರ್ಕಾರ ಕಬಳಿಸಿ ಎರಡು ವರ್ಷಗಳಾಗಿವೆ. ವೈದ್ಯಕೀಯ ಶಿಕ್ಷಣಕ್ಕಾಗಿ ಮೊದಲು CET ಬರೆಯುತ್ತಿದ್ದ ವಿದ್ಯಾರ್ಥಿಗಳು ಈಗ ಕೇಂದ್ರ ಸರ್ಕಾರದ NEET ಪರೀಕ್ಷೆಯನ್ನು ಬರೆಯಬೇಕಾಗಿದೆ. ಇದು ಸಾಮಾನ್ಯವಾಗಿ ಗ್ರಾಮೀಣ ಭಾಗದ ಸರ್ಕಾರಿ ಮತ್ತು ಇತರೆ ಶಾಲೆಗಳಲ್ಲಿ ಓದಿದ ಸ್ಥಳೀಯ ವಿದ್ಯಾರ್ಥಿಗಳಿಗೆ ಕಷ್ಟಕರವಾಗಿದ್ದು, ರಾಜ್ಯದ ಬಹುಪಾಲು ಸೀಟುಗಳು ಖಾಸಗಿ ಶಾಲೆ ವಿದ್ಯಾರ್ಥಿಗಳ ಮತ್ತು ಶ್ರೀಮಂತರ ಪಾಲಾಗುತ್ತಿದೆ ಎಂಬ ಆರೋಗಳಿವೆ.

ಅನೇಕ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆಗಳೂ ಕಂಡು ಬಂದಿದೆ. ಹೀಗಾಗಿ ಇದರ ವಿರುದ್ಧ ತಮಿಳುನಾಡಿನ ಡಿಎಂಕೆ ಪಕ್ಷ ಸತತ ಹೋರಾಟ ನಡೆಸುತ್ತಲೇ ಬಂದಿದೆ. ಇದೀಗ ತಮಿಳುನಾಡಿನ (Tamilnadu) ಅಧಿಕಾರ ಹಿಡಿದ ನಂತರವೂ ಡಿಎಂಕೆ ಪಕ್ಷ ಮತ್ತು ಸಿಎಂ ಎಂ.ಕೆ. ಸ್ಟಾಲಿನ್ NEET ವಿರುದ್ಧ ಹೋರಾಟವನ್ನು ಮುಂದುವರೆಸಿದ್ದಾರೆ. ಹೋರಾಟಕ್ಕೆ ಪೂರಕವಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ (MK Stalin) 12 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ನೀಟ್ ವಿರುದ್ಧದ ಹೋರಾಟಕ್ಕೆ ಬೆಂಬಲವನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ.

ಸಂವಿಧಾನದಲ್ಲಿ ಕಲ್ಪಿಸಲಾಗಿರುವಂತೆ, ಶಿಕ್ಷಣ ಕ್ಷೇತ್ರವನ್ನು ನಿರ್ವಹಿಸುವಲ್ಲಿ ರಾಜ್ಯ ಸರ್ಕಾರಗಳ ಪ್ರಾಮುಖ್ಯತೆಯನ್ನು ಪುನಃಸ್ಥಾಪಿಸಲು ಒಗ್ಗಟ್ಟಿನ ಪ್ರಯತ್ನವನ್ನು ಮಾಡುವ ಅಗತ್ಯವನ್ನು ಎತ್ತಿ ತೋರಿಸುವ ಉದ್ದೇಶದಿಂದ ಈ ಪತ್ರವನ್ನು ಅವರು ಬರೆದಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಪತ್ರವನ್ನು ಹೆಚ್ಚಾಗಿ ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಬರೆದಿದ್ದಾರೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

Back to top button