ರಾಜ್ಯ
ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ…
ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆ ಕಾರಣ ಹೆಚ್ಚು ಜನರು ಬರುವ ಸಾಧ್ಯತೆ ಇರುವುದರಿಂದ ತಾಲ್ಲೂಕಿನ ಪ್ರಸಿದ್ಧ ನಂದಿ ಗಿರಿಧಾಮಕ್ಕೆ ಡಿ.30ರ ಸಂಜೆ 6ರಿಂದ ಜ.2ರ ಸಂಜೆ 6ರವರೆಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಹೊಸ ವರ್ಷದ ಸಂಭ್ರಮವನ್ನು ಆಚರಿಸಲು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಪ್ರವಾಸಿಗರು ಗಿರಿಧಾಮಕ್ಕೆ ಬರುವ ಸಾಧ್ಯತೆ ಹೆಚ್ಚಿದೆ.
ಓಮೈಕ್ರಾನ್ ಸೋಂಕು ಹರಡುವ ಮತ್ತು ಪರಿಸರ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.