ರಾಜ್ಯಸುದ್ದಿ

ತಿಂಗಳಿಗೆ ₹ 1,77,500 ಸಂಬಳ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ 90 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳು ಖಾಲಿ..!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(National Highway Authority of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 90 ಡೆಪ್ಯುಟಿ ಮ್ಯಾನೇಜರ್(Deputy Manager) ಹುದ್ದೆಗಳು ಖಾಲಿ ಇದ್ದು, ಬಿಇ(B.E), ಬಿ.ಟೆಕ್(B.Tech)​ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 1ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 30 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ಹುದ್ದೆಯ ಹೆಸರುಡೆಪ್ಯುಟಿ ಮ್ಯಾನೇಜರ್
ಒಟ್ಟು ಹುದ್ದೆಗಳು90
ವಿದ್ಯಾರ್ಹತೆಬಿಇ, ಬಿ.ಟೆಕ್
ಉದ್ಯೋಗದ ಸ್ಥಳನವದೆಹಲಿ
ವೇತನಮಾಸಿಕ ₹ 15,600-1,77,500
ಅರ್ಜಿ ಸಲ್ಲಿಸುವ ವಿಧಾನಆನ್​ಲೈನ್​
ಅರ್ಜಿ ಸಲ್ಲಿಕೆ ಆರಂಭ ದಿನಾಂಕ1/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ30/11/2021

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 1/11/2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/2021

Related Articles

Leave a Reply

Your email address will not be published. Required fields are marked *

Back to top button