Karnataka Rains Today ಬೆಂಗಳೂರು(ಅ.11): ಇಂದು ಕರ್ನಾಟಕದ ದಕ್ಷಿಣ ಒಳನಾಡು(SIK) ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ(NIK) ಗುಡುಗು ಸಹಿತ ಭಾರೀ ಮಳೆಯಾಗಲಿದ್ದು(Rainfall), ಹಲವೆಡೆ ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮಾಹಿತಿ ನೀಡಿದೆ.
ಜೊತೆಗೆ ಕರಾವಳಿ(Coastal) ಮತ್ತು ಮಲೆನಾಡಿನ(Malnad) ಜಿಲ್ಲೆಗಳಲ್ಲೂ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ(Bay of Bengal)ಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ 19 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗುವ ನಿರೀಕ್ಷೆ ಇದ್ದು, ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಂದರೆ ಬೆಳಗಾವಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳ ಕೆಲವು ಕಡೆ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಭಾರತದ ಕರಾವಳಿ ಪ್ರದೇಶಗಳಲ್ಲಿ ‘ಜವಾದ್’ ಚಂಡಮಾರುತದ ಪ್ರಭಾವದಿಂದ ಮಳೆಯಾಗುವುದಾಗಿ ಹವಾಮಾನ ಇಲಾಖೆ ತಿಳಿಸಿದ್ದು , ಗುಲಾಬ್, ಶಾಹೀನ್ ನಂತರ ಇದೀಗ ಜವಾದ್ ಚಂಡಮಾರುತ ಅಪ್ಪಳಿಸಲಿರುವುದಾಗಿ ಮುನ್ಸೂಚನೆ ನೀಡಿದೆ. ಅಲ್ಲದೇ, ಅ.12 ಮತ್ತು 13ರಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.