ಕ್ರೀಡೆ
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಇಂಗ್ಲೆಂಡ್ ಆಟಗಾರ ಮೊಯೀನ್ ಅಲಿ ವಿದಾಯ
ಹೊಸದಿಲ್ಲಿ: ಇಂಗ್ಲೆಂಡ್‌ನ ಕ್ರಿಕೆಟ್ ತಂಡದ ಆಲ್‌ರೌಂಡರ್ ಮೊಯೀನ್ ಅಲಿ ಅವರು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದಾರೆ.
ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಜೋ ರೂಟ್, ಮುಖ್ಯ ಕೋಚ್ ಕ್ರಿಸ್ ಸಿಲ್ವರ್‌ವುಡ್ ಹಾಗೂ ರಾಷ್ಟ್ರೀಯ ಆಯ್ಕೆದಾರರಿಗೆ ಮೊಯೀನ್ ಅಲಿ ಈ ವಿಷಯವನ್ನು ತಿಳಿಸಿದ್ದಾರೆ. ಸೀಮಿತ ಓವರ್‌ಗಳ ಕ್ರಿಕೆಟ್‌ಗೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಟೆಸ್ಟ್ ಮಾದರಿಗೆ ವಿದಾಯ ಹೇಳಿರುವುದಾಗಿ ಅಲಿ ಕಾರಣ ನೀಡಿದ್ದಾರೆ.
ಮೊಯೀನ್ ಅಲಿ ಇದುವರೆಗೆ 64 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದಾರೆ. 2014ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದ ಇವರು 28.3ರ ಸರಾಸರಿಯಲ್ಲಿ 2914 ರನ್ ಗಳಿಸಿದ್ದಾರೆ. ಐದು ಶತಕ ಮತ್ತು 14 ಅರ್ಧಶತಕ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 195 ವಿಕೆಟ್ ಕಬಳಿಸಿದ್ದಾರೆ.