ಕಳೆದ ಟಿ20 ವಿಶ್ವಕಪ್ನಲ್ಲಿ (T20 World Cup) ಭಾರತ ಕಪ್ ಗೆಲ್ಲುವ ಉತ್ತಮ ಅವಕಾಶವನ್ನು ಕೈಚೆಲ್ಲಿತ್ತು. ಅದರ ಬೆನ್ನಿಗೆ ಏಕದಿನ ವಿಶ್ವಕಪ್ನಲ್ಲಿ ಅತ್ಯುತ್ತಮ ಫಾರ್ಮ್ನಲ್ಲಿ ಇದ್ದಾಗ್ಯೂ ನ್ಯೂಜಿಲೆಂಡ್ (New Zealand) ವಿರುದ್ಧ ಸೆಮಿ ಫೈನಲ್ ಪಂದ್ಯದಲ್ಲಿ ಮುಗ್ಗರಿಸಿತ್ತು. ಹೀಗಾಗಿ ಯುಎಇ ಯಲ್ಲಿ ಈ ತಿಂಗಳ ಮೂರನೇ ವಾರದಿಂದ ಆರಂಭವಾಗಲಿರುವ ವಿಶ್ವಕಪ್ ಟಿ20 ಟೂರ್ನಿಯಲ್ಲಿ ಗೆಲ್ಲಲೇಬೇಕೆಂದು ಬಿಸಿಸಿಐ ಪಣ ತೊಟ್ಟಿದೆ.
ಮತ್ತೊಂದೆಡೆ ವಿರಾಟ್ ಕೊಹ್ಲಿಗೆ (Virat Kohli) ನಾಯಕನಾಗಿ ಇದು ಕೊನೆಯ ಟೂರ್ನಿಯಾಗಿದ್ದು, ಅವರೂ ಸಹ ಗೆಲ್ಲಲೇಬೇಕೆಂಬ ಒತ್ತಡದಲ್ಲಿದ್ದಾರೆ. ಹೀಗಾಗಿ ಬಿಸಿಸಿಐ (BCCI) ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಖ್ಯಾತಿಯ ಮಹೇಂದ್ರ ಸಿಂಗ್ ಧೋನಿ (MS Dhoni) ಅವರನ್ನು ಭಾರತ ತಂಡಕ್ಕೆ ಮೆಂಟರ್ ಆಗಿ ನಿಯೋಜಿಸಿತ್ತು. ಆದರೆ, ಈ ಸೇವೆಗೆ ಧೋನಿ ಯಾವುದೇ ಸಂಭಾವನೆ ಪಡೆದಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅಜಯ್ ಶಾ ಸ್ಪಷ್ಟಪಡಿಸಿದ್ದಾರೆ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ಮಾರ್ಗದರ್ಶಕರಾಗಿ ಭಾರತೀಯ ಕ್ರಿಕೆಟ್ ತಂಡಕ್ಕೆ ಸೇವೆ ಸಲ್ಲಿಸಲು ಒಂದು ಪೈಸೆಯನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಮುಂಬರುವ ಅಕ್ಟೋಬರ್ 16 ರಂದು ಯುಎಇಯಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ಗೆ ಧೋನಿಯನ್ನು ಮಾರ್ಗದರ್ಶಕರಾಗಿ ಆಯ್ಕೆ ಮಾಡಲಾಗಿದೆ.