ಕ್ರೀಡೆ
IND vs ENG T20: ಚೆನ್ನೈನಲ್ಲಿ ಭಾರತಕ್ಕೆ ಗೆಲುವಿನ ತಿಲಕ: ಸರಣಿಯಲ್ಲಿ 2-0 ಮುನ್ನಡೆ

ಚೆನ್ನೈ : ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಎರಡು ವಿಕೆಟ್‌ಗಳಿಂದ ಇಂಗ್ಲೆಂಡ್ ತಂಡವನ್ನು ಮಣಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿದೆ. ಆತಿಥೇಯ ತಂಡದ ಪರ ಭರವಸೆಯ ಬ್ಯಾಟರ್ ತಿಲಕ್ ವರ್ಮಾ ಅಮೋಘ ಬ್ಯಾಟಿಂಗ್ ನಡೆಸಿ ಜಯದಲ್ಲಿ ಮಿಂಚಿದರು.
ಇನ್ನು ಕೊನೆಯ ವರೆಗೂ ಮಣಿಯದೇ ಕೆಚ್ಚೆದೆಯ ಬ್ಯಾಟಿಂಗ್ ಮಾಡಿ ತಂಡದ ಜಯದಲ್ಲಿ ಆಕರ್ಷಿಸಿದರು.
ಶನಿವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 165 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 19.2 ಓವರ್‌ಗಳಲ್ಲಿ 8 ವಿಕೆಟ್‌ಗೆ 166 ರನ್ ಸಿಡಿಸಿ, ಭರ್ಜರಿ ಜಯ ದಾಖಲಿಸಿತು.
ಮಹಮ್ಮದ್ ಶಫಿ ಸ್ಪೋರ್ಟ್ಸ್ ಬ್ಯೂರೋ tv8kannada ಬೆಂಗಳೂರು