ಎಸ್ ಪಿ ಬಿ ವತಿಯಿಂದ ಚಿತ್ರದುರ್ಗದ ಕೂಲಿ ಕಾರ್ಮಿಕರಿಗೆ ಹೊದಿಕೆ ವಿತರಣೆ

ಚಾಮರಾಜನಗರ: ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾವೇದಿಕೆ ವತಿಯಿಂದ ನಗರದ ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ವಾಸವಿರುವ ಚಿತ್ರದುರ್ಗ ಜಿಲ್ಲೆಯ ಪೈಪ್ ಲೈನ್ ಕೆಲಸ ಮಾಡುತ್ತಿರುವ ಕೂಲಿ ಕಾರ್ಮಿಕರಿಗೆ ಹೊದಿಕೆ, ಮಕ್ಕಳ ಆಟಿಕೆ ವಸ್ತುಗಳು, ಹಾಗೂ ತಿಂಡಿ ತಿನಿಸು ವಿತರಿಸಲಾಯಿತು.
ಇದೆ ವೇಳೆ ಕಲಾವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಂ.ಶಿವಣ್ಣ ಮಂಗಲ ಹೊಸೂರು ಅವರು ಮಾತನಾಡಿ, ಚಿತ್ರದುರ್ಗ ಜಿಲ್ಲೆಯಿಂದ ಕುಟುಂಬ ಸಮೇತರಾಗಿ ಬಂದು ಇಲ್ಲಿ ಪೈಪ್ ಲೈನ್ ಕೆಲಸ ಮಾಡುತ್ತಿರುವುದು ತುಂಬಾ ಸಂತೋಷ. ಅವರಿಗೆ ನಮ್ಮ ಸಂಘದ ವತಿಯಿಂದ ಹೊದಿಕೆ, ಮಕ್ಕಳ ಆಟದ ವಸ್ತುಗಳು ಹಾಗೂ ತಿಂಡಿ ತಿನಿಸು ವಿತರಿಸಲಾಯಿತು.ಇದೇ ರೀತಿ ಮುಂದಿನ ದಿನಗಳಲ್ಲಿ ನಮ್ಮ ಸಂಘದ ವತಿಯಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಸೇವೆಗಳು ನಡೆಯಲಿವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾನ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ಜಿಲ್ಲಾಧ್ಯಕ್ಷ ಎಚ್.ಎಂ.ಶಿವಣ್ಣ ಮಂಗಲ ಹೊಸೂರು, ಪ್ರಧಾನ ಕಾರ್ಯದರ್ಶಿ, ಚಂದಕವಾಡಿ ಡಿ.ರಾಜಣ್ಣ, ರಾಮಸಮುದ್ರ ಹೊಸ ಹೌಸಿಂಗ್ ಬೋರ್ಡ್ ಅಧ್ಯಕ್ಷ ಪ್ರಕಾಶ್ ಬೆಲ್ಲದ್, ಫ್ರೆಂಡ್ಸ್ ಮ್ಯೂಸಿಕ್ ಮೆಲೋಡಿಯಸ್ ಮಾಲೀಕರಾದ ಆಲೂರು ದೊರೆರಾಜ್, ಚಂದಕವಾಡಿ ನಾಗಮಹದೇವ್, ದೈಹಿಕ ಶಿಕ್ಷಕರಾದ.ಹೆಚ್.ಎಂ.ನಾಗರಾಜು, ಅಮಚವಾಡಿ ಪ್ರಕಾಶ್ ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ