ಬೆಳಗಾವಿ(ಅ. 18): 2023ರ ವಿಧಾನಸಭೆ (Karnataka Assembly Poll 2023)ಚುನಾವಣೆಗೆ ಈಗಿನಿಂದಲೇ ಬೆಳಗಾವಿ ಜಿಲ್ಲೆಯಲ್ಲಿ(Belagavi Politics) ರಾಜಕೀಯ ಧೃವೀಕರಣ ಆರಂಭವಾಗಿದೆ. ಜೆಡಿಎಸ್ ಮುಖಂಡ ಅಶೋಕ ಪೂಜಾರಿ(JDS Leader Ashok Poojari) ಕಾಂಗ್ರೆಸ್ನತ್ತ ಮುಖ ಮಾಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ(Opposition Leader Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ(KPCC President DK Shivakumar) ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ(Ramesh Jarkiholi) ವಿರುದ್ಧ ಕಾಂಗ್ರೆಸ್(Congress) ನಿಂದ ಸ್ಪರ್ಧೆ ಮಾಡಲು ಈಗಿನಿಂದಲೇ ತಯಾರಿ ಆರಂಭಿಸಿದ್ದಾರೆ.
ಕಾಂಗ್ರೆಸ್ ಸೇರ್ತಾರಾ ಗೋಕಾಕ್ ಪ್ರಭಾವಿ ನಾಯಕ
ಬೆಳಗಾವಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದೀಗ ಪಕ್ಷಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ. ಗೋಕಾಕ್ ಪ್ರಭಾವಿ ನಾಯಕ, ಜೆಡಿಎಸ್ ಅಭ್ಯರ್ಥಿ ಅಶೋಕ ಪೂಜಾರಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಈಗಾಗಲೇ ಅಶೋಕ ಪೂಜಾರಿ ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಹೀಗಾಗಿಯೇ ಬೆಂಗಳೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನ ಖುದ್ದಾಗಿ ಭೇಟಿ ಮಾಡಿದ್ದು, ಕಾಂಗ್ರೆಸ್ ಸೇರ್ಪಡೆ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ.
ಜೆಡಿಎಸ್ ತೊರೆಯಲಿರುವ ಅಶೋಕ್ ಪೂಜಾರಿ
ಕೈ ನಾಯಕರು ಅಶೋಕ ಪೂಜಾರಿಗೆ ಅನೇಕ ಬಾರಿ ಪಕ್ಷಕ್ಕೆ ಸೇರ್ಪಡೆ ಆಗಲು ಆಹ್ವಾನ ನೀಡಿದ್ರು. ಈಗ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಸನ್ನಿಹಿತವಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ.