ಇತ್ತೀಚಿನ ಸುದ್ದಿ

Karnataka Rain: ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಎಚ್ಚರಿಕೆ

ಬೆಂಗಳೂರು ಫೆಬ್ರವರಿ 2: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಜಿನೊಂದಿಗೆ ಚಳಿ ಮುಂದುವರೆದಿದ್ದು ಇಂದಿನಿಂದ ಹಲವೆಡೆ ಮಳೆ ಎಚ್ಚರಿಕೆಯನ್ನು ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರ್ನಾಟಕದ ಕೆಲವೇ ಕೆಲವೆಡೆ ಮಳೆಯಾಗುವ ಸೂಚನೆಯನ್ನು ಐಎಂಡಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಚಳಿ ಪ್ರಮಾಣ ಕಡಿಮೆಯಾಗಲಿದ್ದು ಹಲವೆಡೆ ಒಣಹವೆ ಮುಂದುವರೆಯಲಿದೆ.

ಇಂದಿನಿಂದ ಮುಂದಿನ ಕೆಲವು ದಿನಗಳವರೆಗೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಐಎಂಡಿ ನೀಡಿದೆ. ಕರ್ನಾಟಕದಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿಗೆ ಮಳೆ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದಲ್ಲಿ ಕೆಲವೆಡೆ ಶೀತಗಾಳಿ ಮುಂದುವರೆಯಲಿದ್ದು, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಶೀತ ಗಾಳಿ ಮತ್ತು ಒಣ ಹವಾಮಾನ ಮುಂದುವರಿಯುವ ನಿರೀಕ್ಷೆಯಿದೆ. ಇನ್ನೂ ದೇಶದ ಹವಾಮಾನ ಹೇಗಿದೆ ಎಂದು ನೋಡುವುದಾದರೆ-

ಇಂದು ದೇಶಾದ್ಯಂತ ಹವಾಮಾನ ಹೇಗಿರುತ್ತದೆ?

ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಕೇರಳ, ಲಕ್ಷದ್ವೀಪ ಮತ್ತು ನಾಗಾಲ್ಯಾಂಡ್‌ನಲ್ಲಿ ಇಂದು ಮಳೆಯಾಗುವ ಲಕ್ಷಣ ಕಂಡು ಬಂದಿದೆ. ಇನ್ನೂ ದೇಶದ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಕನಿಷ್ಠ ತಾಪಮಾನ ಹೆಚ್ಚಾಗಬಹುದು.

ದಕ್ಷಿಣ ತಮಿಳುನಾಡಿನಲ್ಲಿಯೂ ಹಗುರದಿಂದ ಮಧ್ಯಮ ಮಳೆಯಾಗುವ ಸೂಚನೆ ನೀಡಲಾಗಿದೆ. ಐಎಂಡಿ ಪ್ರಕಾರ, ಅರುಣಾಚಲ ಪ್ರದೇಶ, ಸಿಕ್ಕಿಂ, ಗಿಲ್ಗಿಟ್ ಬಾಲ್ಟಿಸ್ತಾನ್, ಮುಜಫರಾಬಾದ್ ಮತ್ತು ಲಡಾಖ್‌ಗಳಲ್ಲಿಯೂ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ.

ದೆಹಲಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಜೋರು ಮಳೆ

ಮುಂದಿನ ಎರಡು ದಿನಗಳಲ್ಲಿ ದೆಹಲಿಯ ಹವಾಮಾನದ ಮೇಲೆ ಪಶ್ಚಿಮದ ಹವಾಮಾನ ಬದಲಾವಣೆಯ ಪರಿಣಾಮವನ್ನು ಕಾಣಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಸೋಮವಾರ (ಫೆಬ್ರವರಿ 3) ದೆಹಲಿಯ ವಿವಿಧ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರಿಂದಾಗಿ ದೆಹಲಿಯಲ್ಲಿ ತಾಪಮಾನ ಕಡಿಮೆಯಾಗುವ ಸಾಧ್ಯತೆಗಳಿವೆ. ಇಂದು ಬೆಳಿಗ್ಗೆಯಿಂದ ದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿರಲಿದೆ. ದೆಹಲಿಯಲ್ಲಿ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ತಲುಪಿದೆ.

ದೆಹಲಿಯಲ್ಲಿ ಹಗಲಿನಲ್ಲಿ ಗಾಳಿಯ ವೇಗ ಗಂಟೆಗೆ 4 ರಿಂದ 8 ಕಿಲೋಮೀಟರ್ ಇರುತ್ತದೆ. ದೆಹಲಿಯಲ್ಲಿ ಇಂದು ಗರಿಷ್ಠ ತಾಪಮಾನ 23 ರಿಂದ 25 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಕನಿಷ್ಠ ತಾಪಮಾನ 8 ರಿಂದ 10 ಡಿಗ್ರಿ ಸೆಲ್ಸಿಯಸ್ ವರೆಗೆ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ದೆಹಲಿಯಲ್ಲಿ ಹವಾಮಾನ ಇದ್ದಕ್ಕಿದ್ದಂತೆ ಬದಲಾಗಲಿದೆ. ಫೆಬ್ರವರಿ ತಿಂಗಳು ಬಿಸಿಲಿನಿಂದ ಆರಂಭವಾಯಿತು. ಕಳೆದ 15 ವರ್ಷಗಳಲ್ಲಿ ದೆಹಲಿ-ಎನ್‌ಸಿಆರ್ ಫೆಬ್ರವರಿ ತಿಂಗಳಿನಲ್ಲಿ ಅತ್ಯಂತ ಬಿಸಿಲಿನ ಆರಂಭವನ್ನು ಕಂಡಿದೆ.

ವರದಿ : B ಆಶ್ರಿತ್ tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button