ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ನಾಗರೀಕರ ಹತ್ಯೆ ಮುಂದುವರದಿದ್ದು, ಇಲ್ಲಿನ ಸ್ಥಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ (encounter) ಮುಂದುವರೆದಿದ್ದು, ನಿನ್ನೆ ಇಬ್ಬರು ಉಗ್ರರನ್ನು (miltants) ಹತ್ಯೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಪರಿಣಾಮ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು (Armed Force) ಕಳುಹಿಸಲು ನಿರ್ಧರಿಸಿದೆ. ಮೂಲಗಳ ಪ್ರಕಾರ, ಕಣಿವೆ ರಾಜ್ಯದ ನಾಗರಿಕರಿಗೆ ಭದ್ರತೆ ನೀಡಲು ಮತ್ತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಇತರ ಪಡೆಗಳಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 25 ಹೆಚ್ಚು ಪಡೆಗಳ ಸೈನ್ಯವನ್ನು ಕಳುಹಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ (central Government ) ಅಧಿಕೃತ ಆದೇಶ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಹಂತ ಹಂತವಾಗಿ ಸೇನಾ ಪಡೆ ರವಾನೆ
ಜಮ್ಮು ಮತ್ತು ಕಾಶ್ಮೀರಕ್ಕೆ ಹಂತ ಹಂತವಾಗಿ ಸಿಆರ್ಪಿಎಫ್ನ (CRPF) ಹೆಚ್ಚುವರಿ ಪಡೆಗಳುನ್ನು ಕಳುಹಿಸಲಾಗುವುದು. ಮೊದಲ ಹಂತದಲ್ಲಿ 10 ಪಡೆಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುವುದು ಮುಂದಿನ ಎರಡು ಹಂತದಲ್ಲಿ ಉಳಿದ 15 ಪಡೆಗಳನ್ನು ಕಳುಹಿಸಲಾಗವುದು
ಶೀಘ್ರದಲ್ಲೇ ಅಧಿಕೃತ ಆದೇಶ
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ದೇಶದ ವಿವಿಧ ಭಾಗಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಆರ್ಪಿಎಫ್ ಪಡೆಗಳನ್ನು ಕರೆಸಿಕೊಂಡು ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುವುದು. ಶೀಘ್ರದಲ್ಲೇ, ಈ ಸಂಬಂಧ ಭಾರತೀಯ ಸೇನೆ ಅಧಿಕೃತ ಆದೇಶ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ.