ರಾಜಕೀಯಸುದ್ದಿ

ಸಿದ್ದರಾಮಯ್ಯ: ಮೋದಿ ಸರ್ಕಾರ ಅತ್ಯವಸರದಿಂದ 100 ಕೋಟಿ ಲಸಿಕೆ ಸಂಭ್ರಮಾಚರಣೆಗೆ ಮುಂದಾಗಿರುವುದು ಹಾಸ್ಯಾಸ್ಪದ..!

ಬೆಂಗಳೂರು (ಅಕ್ಟೋಬರ್​ 22); ಕೇಂದ್ರ ಬಿಜೆಪಿ ಸರ್ಕಾರ (BJP Government) ಕಳೆದ ಮೇ ತಿಂಗಳಲ್ಲಿ ದೇಶದಾದ್ಯಂತ ಕೊರೋನಾ ಲಸಿಕೆ (Corona Vaccine) ಅಭಿಯಾನಕ್ಕೆ ಚಾಲನೆ ನೀಡಿತ್ತು. ಅದರಂತೆ ಈವರೆಗೆ ದೇಶದಲ್ಲಿ 100 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಬಿಜೆಪಿ ಸರ್ಕಾರ ಇದನ್ನು ಸಾಧನೆ ಎದು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕಳೆದ ಎರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ (Social Media) ಪರ-ವಿರೋಧವಾಗಿ ಸಾಕಷ್ಟು ವಾದ-ವಿವಾದಗಳು ನಡೆಯುತ್ತಿವೆ.

ಆದರೆ, ಬಿಜೆಪಿಯವರ (BJP) ಸಂಭ್ರಮಾಚರಣೆ ವಿರುದ್ಧ ಇಂದು ಟ್ವಿಟರ್​ ಮೂಲಕ ಸರಣಿ ಟ್ವೀಟ್​ ಮಾಡಿ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), “ಯಾವ ಸಾಧನೆಗೆ ಸಂಭ್ರಮಾಚರಣೆ?” ಎಂದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ (Central Government) ವಿರುದ್ಧ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ದೇಶದ 139 ಕೋಟಿ ಜನರಲ್ಲಿ 29 ಕೋಟಿ ಜನರಿಗೆ ಮಾತ್ರ ಎರಡು ಡೋಸ್ ಕೊರೊನಾ ಲಸಿಕೆ ನೀಡಿರುವ ನರೇಂದ್ರ ಮೋದಿ ಸರ್ಕಾರ, ಅತ್ಯವಸರದಿಂದ 100 ಕೋಟಿ ಲಸಿಕೆ ನೀಡಿಕೆಯ ಸಂಭ್ರಮಾಚರಣೆಯ ಖಾಲಿ ತಟ್ಟೆ ಬಡಿಯುತ್ತಿರುವುದು ಹಾಸ್ಯಾಸ್ಪದವಾಗಿದೆ.

Related Articles

Leave a Reply

Your email address will not be published. Required fields are marked *

Back to top button