ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ(shivaram karanth layout) ನಿವೇಶನ ತೆರವು ವಿಚಾರವಾಗಿ ಹೈಡ್ರಾಮಾವೇ ನಡೆದಿದೆ. ಬೆಳ್ಳಂಬೆಳಗ್ಗೆ ಜೆಸಿಬಿ(JCB)ಯೊಂದಿಗೆ ಬಿಡಿಎ(BDA) ಅಧಿಕಾರಿಗಳು ಮನೆಗಳ ತೆರವಿಗೆ ಮುಂದಾಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ.
ಮನೆಗಳ ತೆರವು ಹಿನ್ನೆಲೆಯಲ್ಲಿ ಶಾಸಕ ಆರ್.ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಬಿಡಿಎ ಅಧಿಕಾರಿಗಳು ಹಾಗೂ ಶಾಸಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ.
ತೆರವು ಕಾರ್ಯಾಚರಣೆಯನ್ನು ನಿಲ್ಲಿಸಿ ಮತ್ತಷ್ಟು ಸಮಾಯಾವಕಾಶ ನೀಡುವಂತೆ ನಿವಾಸಿಗಳು ಮನವಿ ಮಾಡಿದ್ದಾರೆ. ಆದರೆ ಬಿಡಿಎಂ ಅಧಿಕಾರಿಗಳು ಇದಕ್ಕೆ ಒಪ್ಪದ ಕಾರಣ ಸ್ಥಳದಲ್ಲಿ ಜಟಾಪಟಿ ನಡೆಯಿತು.