ಗೃಹ ಲಕ್ಷ್ಮಿ ಯೋಜನೆ ಹಣ ಯಾವಾಗ; ಸಿಹಿ ಸುದ್ದಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಪಂಚ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಲವಾರು ಮಹಿಳೆಯರಿಗೆ ಆರ್ಥಿಕ ಸಬಲೀಕರಣ ನೀಡುತ್ತಿದೆ. ಆದರೆ, ಇತ್ತೀಚೆಗೆ ಕೆಲವು ಜಿಲ್ಲೆಗಳಲ್ಲಿ ಹಣ ಲಭ್ಯತೆ ಕುರಿತು ಸಮಸ್ಯೆಗಳು ಎದುರಾಗಿವೆ. ಕೆಲವು ಫಲಾನುಭವಿಗಳಿಗೆ 15ನೇ, 16ನೇ ಮತ್ತು 17ನೇ ಕಂತಿನ ಹಣ ಇನ್ನೂ ಜಮಾ ಆಗಿಲ್ಲ, ಇದರಿಂದಾಗಿ ಮಹಿಳೆಯರು ತೀವ್ರ ನಿರೀಕ್ಷೆಯಲ್ಲಿದ್ದಾರೆ.
ಯಾಕೋ ಆರಂಭದಲ್ಲಿ ಗೃಹಲಕ್ಷ್ಮಿ ಯೋಜನೆ ಬಗ್ಗೆ ಇದ್ದ ಉತ್ಸಾಹವನ್ನು ರಾಜ್ಯ ಸರ್ಕಾರ ತೋರುತ್ತಿಲ್ಲ.. ಒಂದು ರೀತಿ ಈ ಯೋಜನೆ ಕುಂಟುತ್ತಾ ಸಾಗಿದೆ ಎನ್ನಬಹುದು.ಹಣದ ಬಿಡುಗಡೆ ಮೂರ್ನಾಲ್ಕು ತಿಂಗಳಿನಿಂದ ವಿಳಂಬವಾಗಿದ್ದು, ಇದಕ್ಕೆ ಸರ್ಕಾರವೇನೋ ಅನೇಕ ಕಾರಣಗಳನ್ನು ನೀಡುತ್ತಿದೆ. ಆದರೆ ಇದರ ಜೊತೆಗೆ ಸರ್ಕಾರ ಈಗಾಗಲೇ ಪೆಂಡಿಂಗ್ ಇರುವ ಹಣ ಬಿಡುಗಡೆ ಪ್ರಕ್ರಿಯೆ ಆರಂಭಿಸಿದ್ದು, ಹಂತ ಹಂತವಾಗಿ ಎಲ್ಲಾ ಖಾತೆಗೆ (Bank Account) ಹಣ ವರ್ಗಾವಣೆ ಮಾಡಲಾಗುತ್ತಿದೆ ಎಂದು ಹೇಳಾಗುತ್ತಿದೆ.
ಅಧಿಕೃತ ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ರಸ್ತೆ ಅಪಘಾತದಿಂದಾಗಿ ಕಳೆದ 13 ದಿನಗಳಿಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ವಿಶ್ರಾಂತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿಯ ಗೃಹಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ದೇವರರ ದಯೆಯಿಂದ ಸಂಪೂರ್ಣ ಗುಣಮುಖಳಾಗಿದ್ದೇನೆ. ವೈದ್ಯರು ಸುಮಾರು 6 ವಾರಗಳ ಕಾಲ ವಿಶ್ರಾಂತಿ ಹೇಳಿದ್ದಾರೆ. ಹಾಗಾಗಿ ಇನ್ನೆರಡು ವಾರಗಳಲ್ಲಿ ಪ್ರಯಾಣ ಆರಂಭಿಸಿ, ಸಾರ್ವಜನಿಕ ಜೀವನಕ್ಕೆ ಮರಳುವ ವಿಶ್ವಾಸವಿದೆ. ನಾನು ಕಳೆದ 25 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವೆ. ಜನರ ಮಧ್ಯೆಯೇ ನನ್ನ ದೈನಂದಿನ ಜೀವನ ನಡೆಯುತ್ತಿದೆ. ಈಗಲೂ ದೂರವಾಣಿ ಮೂಲಕ ಜನರ ಸಂಪರ್ಕದಲ್ಲಿರುವೆ. ಜನರ, ದೇವರ ಆಶೀರ್ವಾದದಿಂದ ಸಂಪೂರ್ಣ ಗುಣಮುಖ ಆಗಿರುವೆ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಹಣ ಸಕಾಲದಲ್ಲಿ ಬಿಡುಗಡೆ
ಗೃಹಲಕ್ಷ್ಮೀ ಯೋಜನೆಯ ಹಣ ಮುಂದಿನ ತಿಂಗಳಿನಿಂದ ಸಕಾಲದಲ್ಲಿ ಬಿಡುಗಡೆ ಆಗಲಿದೆ. ೧೫ ದಿನಗಳ ಹಿಂದೆ ನಮ್ಮ ಇಲಾಖೆಗೆ ಹಣ ಬಂದಿದೆ. ಮಹಿಳೆಯರು ಯಾವುದೇ ಕಾರಣಕ್ಕೂ ಚಿಂತೆ ಮಾಡುವುದು ಬೇಡ. ಹಿಂದಿನ ಮಾದರಿಯಂತೆ ಜಿಲ್ಲಾ ಉಪ ನಿರ್ದೇಶಕರ ಮೂಲಕವೇ ಗೃಹಲಕ್ಷ್ಮೀ ಯೋಜನೆ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ. ತಾಲೂಕು ಪಂಚಾಯಿತಿ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಣ ರವಾನೆಯಾಗುತ್ತಿದ್ದು, ಉಪ ನಿರ್ದೇಶಕರ ಮೂಲಕ ಹಣ ಹಾಕಲಾಗುತ್ತಿದೆ . ಮುಂದಿನ ತಿಂಗಳು ಎಲ್ಲವು ಸರಿ ಹೋಗಲಿದೆ. ಈ ಹಿಂದಿನಂತೆಯೇ ಎಲ್ಲಾ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಖಾತೆಗೆ ಹಣ ಹಾಕಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಮೈಕ್ರೋ ಫೈನಾನ್ಸ್ ಹಾವಳಿಗೆ ತಡೆ
6 ತಿಂಗಳ ಹಿಂದೆಯೇ ಮೈಕ್ರೋ ಫೈನಾನ್ಸ್ ಸಮಸ್ಯೆ ಬಗ್ಗೆ ತಿಳಿದಿತ್ತು. ನಾನು ತಕ್ಷಣವೇ ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರ ಗಮನಕ್ಕೆ ತಂದಿದ್ದೆ, ಜೊತೆಗೆ ಮೈಕ್ರೋ ಫೈನಾನ್ಸ್ ಸಂಸ್ಥೆಯವರನ್ನು ಕರೆಸಿ ಮಹಿಳೆಯರಿಗೆ ತೊಂದರೆ ನೀಡಬಾರದು ಎಂದು ಬುದ್ದಿ ಹೇಳಿದ್ದೆ. ಇದರ ಮಧ್ಯೆಯೂ ಕ್ಷೇತ್ರದ ಹೊರಗಿನ ಐದಾರು ಮುಖಂಡರು ಫೈನಾನ್ಸ್ ಮಾಡಿಸುತ್ತಿದ್ದರು. ಸುಮಾರು 20 ಸಾವಿರ ಮಹಿಳೆಯರು ಫೈನಾನ್ಸ್ ತೆಗೆದುಕೊಂಡು ಬಿಟ್ಟಿದ್ದರು ಎಂದು ಸಚಿವರು ತಿಳಿಸಿದರು.
ಒಟ್ಟಾರೆ ರಾಜ್ಯದಲ್ಲಿ ಬಾಕಿ ಇರುವ ಗೃಹಲಕ್ಷ್ಮೀ ಯೋಜನೆಯ 16 ಮತ್ತು 17ನೇ ಕಂತುಗಳ ಪಾವತಿ ಹಂತ ಹಂತವಾಗಿ ಮಾಡಲಾಗುತ್ತಿದ್ದು, ಫೆಬ್ರವರಿ ಕೊನೆಯೊಳಗೆ ಎಲ್ಲಾ ಬಾಕಿಯಿರುವ ಕಂತುಗಳು ಹಂಚಿಕೆಯಾಗುವ ಸಾಧ್ಯತೆ ಇದೆ ಎಂದು