ರಾಜ್ಯಸುದ್ದಿ

ಪೆಟ್ರೋಲ್​ ಬೆಲೆ ಏರಿಕೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗೆ ಕಾಂಗ್ರೆಸ್​ ಸಜ್ಜು: ಇಂದು ರೂಪುರೇಷ ಸಭೆ..!

ನವದೆಹಲಿ (ಅ.‌ 24): ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ (International Oil Market) ಪೆಟ್ರೋಲ್ (Petrol) ಮತ್ತು ಡೀಸೆಲ್ (Diesel) ಬೆಲೆಗಳು ಕಡಿಮೆ ಇದ್ದರೂ, ನಿರುದ್ಯೋಗ (Unemployment), ಹಣದುಬ್ಬರ, ಹವಾಮಾನ ವೈಪರೀತ್ಯ ಮತ್ತಿತರ ಸಮಸ್ಯೆಗಳಿಂದ ಜನ ಸಾಮಾನ್ಯ ಕಂಗಲಾಗಿದ್ದರೂ ಪ್ರಧಾನ ಮಂತ್ರಿ ನರೇಂದ್ರ ಮೋದಿ (Prime Minister Narendara Modi) ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರವು ನಿರಂತರವಾಗಿ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಳ ಮಾಡುತ್ತಿದೆ.

ಈ‌ ಹಿನ್ನೆಲೆಯಲ್ಲಿ ಪ್ರಮುಖ ಪ್ರತಿಪಕ್ಷವಾದ ಕಾಂಗ್ರೆಸ್ (Congress) ನವೆಂಬರ್ 14ರಿಂದ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ಎಐಸಿಸಿ ಕಚೇರಿಯಲ್ಲಿ (AICC Head Quarters) ಇಂದು ನಡೆಯುವ ಎಲ್ಲಾ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿ (Pradesh Congress Samiti) ಅಧ್ಯಕ್ಷರು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ (AICC General Secretaries) ಸಭೆಯಲ್ಲಿ ರೂಪು ರೇಶೆಗಳನ್ನು ನಿರ್ಧರಿಸಲಾಗುತ್ತದೆ.

ಪ್ರತಿಭಟನೆ ತೀವ್ರಗೊಳಿಸಲು ತೀರ್ಮಾನ
ದೇಶಾದ್ಯಂತ ಹಲವು ಸಮಸ್ಯೆಗಳಿದ್ದು ಜನ‌ ತೀವ್ರ ಸಂಕಷ್ಟದಲ್ಲಿದ್ದಾರೆ. ಕಷ್ಟದಲ್ಲಿ ಇರುವ ಜನರ ನೆರವಿಗೆ ಬರುವ ಬದಲು ಕೇಂದ್ರ ಬಿಜೆಪಿ ಸರ್ಕಾರ (Union Government) ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಬೆಲೆಗಳನ್ನು ಹೆಚ್ಚಳ ಮಾಡಿ ಇನ್ನಷ್ಟು‌ ಹೊರೆ ಏರುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಹೆಚ್ಚೆಚ್ಚು ತೆರಿಗೆ ಹಾಕಿ ಜನರಿಂದ ಹಣವನ್ನು ಲೂಟಿ ಮಾಡುತ್ತಿದೆ. ಸರ್ಕಾರದ ಬೊಕ್ಕಸ ತುಂಬಿಸಿಕೊಳ್ಳಲು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಈಗ ಪ್ರತಿಭಟನೆಯನ್ನು ತೀವ್ರಗೊಳಿಸಿ ನವೆಂಬರ್ 14ರಿಂದ ದೇಶಾದ್ಯಂತ ಬೆಲೆ ಏರಿಕೆ ಬಗ್ಗೆ ಜನ ಜಾಗೃತಿ ಮೂಡಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

Related Articles

Leave a Reply

Your email address will not be published. Required fields are marked *

Back to top button