ದೇಶ

Delhi Election 2025 Live: ದೆಹಲಿ ಚುನಾವಣೆ ಮತದಾನ ಆರಂಭ

ರಾಜಧಾನಿ ದೆಹಲಿಯಲ್ಲಿಇಂದು (ಫೆಬ್ರವರಿ 5,ಬುಧವಾರ) ಮತದಾನ ನಡೆಯಲಿದೆ. ಹಿಂದೆಂದೂ ಕಾಣದ ಜಿದ್ದಾ ಜಿದ್ದಿನ ಕುರುಕ್ಷೇತ್ರವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿಯ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ಸೇರಿದಂತೆ ಪಕ್ಷೇತರ ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಮತದಾರ ಬರೆಯಲಿದ್ದಾನೆ.

ದೆಹಲಿಯ 70 ಕ್ಷೇತ್ರಗಳಿಗೆ ಒಂದೇ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು (ಫೆಬ್ರವರಿ 5) ಮತದಾನ ನಡೆಯಲಿದ್ದು, ಫೆಬ್ರವರಿ 8 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಹೊರಬೀಳಲಿದೆ.ದೆಹಲಿಯ 70 ವಿಧಾನಸಭಾ ಸ್ಥಾನಗಳಿಗೆ ಒಟ್ಟು 1.56 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ.ಕಣದಲ್ಲಿ 699 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ದೆಹಲಿಯಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 36. ರಾಜ್ಯದ ಆಡಳಿತ ಪಕ್ಷ ಎಎಪಿ. ಈ ಬಾರಿ ಚುನಾವಣೆಯಲ್ಲಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ತ್ರಿಕೋಣ ಸ್ಪರ್ಧೆ ಇದೆ.

ಇನ್ನೂ ಚುನಾವಣಾ ಆಯೋಗ ಚುನಾವಣೆಯನ್ನು ನ್ಯಾಯಸಮತವಾಗಿ ನಡೆಸಲು ಸಕಲ ರೀತಿಯಲ್ಲಿ ತಯಾರಿ ನಡೆಸಿದೆ. 3 ಸಾವಿರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಎಲ್ಲವೂ ಸೂಕ್ಷ್ಮ ಎಂದು ಗುರುತಿಸಲಾಗಿದೆ. ಆದ್ದರಿಂದ ಚುನಾವಣಾ ಭದ್ರತೆಗೆ ಹೆಚ್ಚಿನ ಗಮನ ನೀಡಲಾಗಿದೆ. 150 ಪ್ಯಾರಾ ಮಿಲಿಟರಿ ಪಡೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಅಲ್ಲದೇ ದೆಹಲಿಯ ತುಂಬಾ 30,000 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. 5 ಗಂಟೆಯ ಒಳಗೆ ಮತಗಟ್ಟೆಗೆ ಬಂದವರಿಗೆ ಮತದಾನ ಮಾಡಲು ಅವಕಾಶ ನೀಡಲಾಗುತ್ತದೆ.

Related Articles

Leave a Reply

Your email address will not be published. Required fields are marked *

Back to top button