Gold Rate on October 28, 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆಯಾಗಿದ್ದು, ಆಭರಣ ಪ್ರಿಯರ ಮೊಗದಲ್ಲಿ ಖುಷಿ ತಂದಿದೆ. ದೀಪಾವಳಿಗೂ ಮೊದಲೇ ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಇತ್ತ ಹೂಡಿಕೆದಾರರಿಗೂ ಇಂದು ಚಿನ್ನ ಸಂತಸ ನೀಡಿದೆ. ಅದೇ ರೀತಿ, ಬೆಂಗಳೂರಿನಲ್ಲೂ (Bengaluru) ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 300 ರೂ. ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,270 ರೂ. ಇತ್ತು, ಇಂದು 140 ರೂ. ಇಳಿಕೆಯಾಗಿ 47,130 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,270 ರೂ. ಇತ್ತು, ಇಂದು 48,130 ರೂ. ಗೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,820 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,750 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.