ರಾಜ್ಯಸುದ್ದಿ

ಮುಂದಿನ 24 ಗಂಟೆ ಸುರಿಯಲಿದೆ ಭಾರೀ ಮಳೆ..!

ಬೆಂಗಳೂರು:  ದಕ್ಷಿಣ ಕರ್ನಾಟಕ, ಕರಾವಳಿ ಭಾಗದಲ್ಲಿ ಮಳೆಯಾಗುವ (Rainfall) ಸಾಧ್ಯತೆಗಳಿವೆ. ಕಳೆದ ನಾಲ್ಕೈದು ದಿನಗಳಿಂದ ವಿಶ್ರಾಂತಿ ನೀಡಿದ್ದ, ಮಳೆರಾಯ ಇವತ್ತಿನಿಂದ ಅಬ್ಬರಿಸಲು ಶುರು ಮಾಡಲಿದ್ದಾನೆ.  ಇಂದಿನಿಂದ ಆರಂಭವಾಗುವ ಮಳೆ ಅಕ್ಟೋಬರ್ 30ರವೆರೆಗೆ ಸುರಿಯಲಿದೆ ಎಂದು  ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತು ಬೆಂಗಳೂರಿನಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಇರಲಿದೆ. ಇಂದು ರಾತ್ರಿಯೇ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಡುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಹೆಚ್ಚಿದೆ. ಚಳಿಗಾಲ ಆರಂಭ ದಿನಗಳಾಗಿದ್ದರಿಂದ, ಬೆಳಗಿನ ಜಾವ ಮತ್ತು ಸಂಜೆ ಶೀತ ಗಾಳಿಯ ಅನುಭವ ಆಗಲಿದೆ.

ಮೈಸೂರಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇದ್ದು, ಮಳೆಯ ಸಾಧ್ಯತೆಗಳಿವೆ. ಬಳ್ಳಾರಿಯಲ್ಲಿ ಬೇಸಿಗೆ ವಾತಾವರಣ ಇರಲಿದೆ. ಗರಿಷ್ಠ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಉಡುಪಿ,  ಹಾಸನ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ನದಿಪಾತ್ರದ ಜನಕ್ಕೆ ಎಚ್ಚರಿಕೆ

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ (Rainfall)ಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಅಕ್ಟೋಬರ್ ಅಂತ್ಯದ ವೇಳೆಗೆ ಸುರಿಯುತ್ತಿರುವ  ಮಳೆಗೆ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗುತ್ತುದ್ದ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಯಾವುದೇ ಕ್ಷಣದಲ್ಲಿ  ಡ್ಯಾಂ ಗೇಟ್ ತೆರೆಯುವ ಸಾಧ್ಯತೆಗಳಿದ್ದು, ನದಿ ತೀರಕ್ಕೆ  ತೆರಳದಂತೆ ಸೂಚನೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

Back to top button