ರಾಜ್ಯಸುದ್ದಿ

ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ ಸಂಭ್ರಮ: ಕನ್ನಡದಲ್ಲಿ ಪ್ರಧಾನಿ ಮೋದಿ ಶುಭ ಹಾರೈಕೆ..!

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಶುಭ ಹಾರೈಕೆಗಳು. ಕರ್ನಾಟಕವು ತನ್ನ ಜನರ ಹೊಸತನದ ಶೋಧದ ತುಡಿತದಿಂದಾಗಿ ವಿಶೇಷ ಛಾಪು ಮೂಡಿಸಿದೆ. ರಾಜ್ಯವು ಅತ್ಯುತ್ಕೃಷ್ಟ ಸಂಶೋಧನೆ ಮತ್ತು ಉದ್ಯಮಶೀಲತೆಯಿಂದಾಗಿ ಮುಂಚೂಣಿಯಲ್ಲಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವು ಯಶಸ್ಸಿನ ಹೊಸ ಎತ್ತರವನ್ನು ಏರಲಿ ಎಂದು ಪ್ರಧಾನಿಗಳು ಟ್ವೀಟ್ ಮಾಡಿದ್ದಾರೆ.

ಬೆಳಗಾವಿಯಲ್ಲಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮ

ಗಡಿ ಜಿಲ್ಲೆ ಬೆಳಗಾವಿ(Belagavi)ಯಲ್ಲಿ ಕರ್ನಾಟಕ ರಾಜ್ಯೋತ್ಸವವನ್ನ ಸಂಭ್ರಮದಿಂದ ಆಚರಿಸಲಾಗುತ್ತಿದೆ.  ಬೆಳಗಾವಿ ಚನ್ನಮ್ಮ ವೃತ್ತ ಹೂವುಗಳಿಂದ ಅಲಂಕಾರಗೊಂಡು ಮದವಣ ಗಿತ್ತಿಯಂತೆ ಶೃಂಗಾರಗೊಂಡಿದೆ. ಪುನೀತ್ ರಾಜ್ ಕುಮಾರ್ (Pueneeth Rajkumar Death) ನಿಧನದ ಹಿನ್ನೆಲೆ ಅದ್ಧೂರಿ ರಾಜ್ಯೋತ್ಸವ ಮೆರವಣಿಗೆಯನ್ನು ರದ್ದುಗೊಳಿಸಿ, ಸರಳವಾಗಿ ಆಚರಿಸಲಾಗುತ್ತಿದೆ. ಚನ್ನಮ್ಮ ವೃತ್ತದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಬ್ಯಾನರ್ ಹಾಕಲಾಗಿದೆ.

Related Articles

Leave a Reply

Your email address will not be published. Required fields are marked *

Back to top button