Gold Rate on November 2, 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಂಗಳೂರಿನಲ್ಲಿ (Bengaluru) ಸಹ ಇಂದು ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 46,740 ರೂ. ಇತ್ತು. ಇಂದು ಸಹ ಅದೇ ದರ ಇದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,740 ರೂ. ಇತ್ತು. ಇಂದು ಸಹ ಅದೇ ದರವಿದೆ. ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದ್ದರೆಬೆಳ್ಳಿ ದರ (Silver Rate) ದೇಶದಲ್ಲಿ ಇಳಿಕೆಯಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,600 ರೂ. ಇತ್ತು, ಇಂದು 200 ರೂ. ಕಡಿಮೆಯಾಗಿ 64,400 ರೂ. ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,770 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,700 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಚಿನ್ನದ ಮೇಲಿನ ಹೂಡಿಕೆ
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 49,110 ರೂ.ಇದ್ದರೆ, ಮುಂಬೈನಲ್ಲಿ 47,740 ರೂ., ದೆಹಲಿಯಲ್ಲಿ 51,100 ರೂ. ಹಾಗೂ ಕೋಲ್ಕತ್ತದಲ್ಲಿ 49,850 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.