ಎಸ್.ಪಿ.ಬಾಲಸುಬ್ರಹ್ಮಣ್ಯಂ ಸಂಘದಿಂದ ಪೌರಕಾರ್ಮಿಕರಿಗೆ ಸೀರೆ ವಿತರಣೆ

ಚಾಮರಾಜನಗರ: ಫೆ.04: ಡಾ.ಎಸ್.ಪಿ ಬಾಲಸುಬ್ರಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ವತಿಯಿಂದ ನಗರದಲ್ಲಿ ಇಂದು ಪೌರಕಾರ್ಮಿಕರಿಗೆ ಸೀರೆಗಳನ್ನು ವಿತರಿಸಲಾಯಿತು.
ಇದೇ ವೇಳೆ ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆಲೂರು ಮಲ್ಲು ಮಾತನಾಡಿ, ಪೌರಕಾರ್ಮಿಕರಿಗೆ ಸರ್ಕಾರವು ಇನ್ನು ಹೆಚ್ಚಿನ ಅನುಕೂಲ ಕಲ್ಪಿಸಿಕೊಡಬೇಕು. ಎಸ್ ಪಿ ಬಾಲಸುಬ್ರಹ್ಮಣ್ಯಂ ಗಾಣಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ಯಿಂದ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುವುದು ಶ್ಲಾಘನೀಯ ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಇಂತಹ ಸೇವೆಗಳನ್ನ ಮಾಡುವಂತೆ ಶಕ್ತಿ ನೀಡಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್.ಪಿ ಬಾಲಸುಬ್ರಹ್ಮಣ್ಯಂ ಗಾನಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆಯ ಜಿಲ್ಲಾಧ್ಯಕ್ಷ ಹೆಚ್.ಎಂ. ಶಿವಣ್ಣ ಮಂಗಲ ಹೊಸೂರು, ಜಿಲ್ಲಾ ರೈತ ಹಿತ ರಕ್ಷಣಾ ಹೋರಾಟ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವನಪುರ ರಾಜಶೇಖರ್, ಸಾಹಿತಿ ಸಿ.ಶಂಕರ್ ಅಂಕನಶೆಟ್ಟಿಪುರ, ಕಲಾ ವೇದಿಕೆಯ ಖಜಾಂಚಿ ಸಿ.ಡಿ.ಪ್ರಕಾಶ್, ಗಾಯಕರಾದ ಚಂದಕವಾಡಿ ನಾಗಮಹದೇವ್, ವಸಂತ ಬಂಗಾರು, ಬೇಕ್ ಪಾಯಿಂಟ್ ಹೋಟೆಲ್ ಮಾಲೀಕ ವಿಜಯಕುಮಾರ್,ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಉಪಾಧ್ಯಕ್ಷ ರಾಮಸಮುದ್ರ ಸುಂದರ್, ಉಗನೆ ಹುಂಡಿ ರಂಗಸ್ವಾಮಿ, ಮೂಗೂರು ಮೂರ್ತಿ ಸೇರಿದಂತೆ ಇತರರಿದ್ದರು.
ವರದಿ:ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ