ರಾಜ್ಯಸುದ್ದಿ

ಚಿನ್ನಾಭರಣ ಪ್ರಿಯರ ಮುಖದಲ್ಲಿ ಅರಳಿದ ನಗು: ಇಳಿಕೆಯಾಯ್ತು ಬೆಲೆ, ಇಲ್ಲಿದೆ ಇವತ್ತಿನ ದರ..!

Gold Rate on November 10, 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಇಳಿಕೆಯಾಗಿದೆ. ಅದೇ ರೀತಿ, ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,030 ರೂ. ಇತ್ತು, ಇಂದು 46,990 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,030 ರೂ. ಇತ್ತು. ಇಂದು 47,990 ರೂ. ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?

ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 49,100 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 45,000 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.

ಚೆನ್ನೈನಲ್ಲಿ 49,390 ರೂ.ಇದ್ದರೆ, ಮುಂಬೈನಲ್ಲಿ 47,990 ರೂ., ದೆಹಲಿಯಲ್ಲಿ 51,400 ರೂ. ಹಾಗೂ ಕೋಲ್ಕತ್ತದಲ್ಲಿ 50,150 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಶಿಕ್‌ನಲ್ಲೂ ಹೆಚ್ಚೂ ಕಡಿಮೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ನಗರದಿಂದ ನಗರಕ್ಕೆ ವ್ಯತ್ಯಾಸ

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

Related Articles

Leave a Reply

Your email address will not be published. Required fields are marked *

Back to top button