ಜನವರಿಯಲ್ಲಿ ತೆರವಾಗುತ್ತಿರುವ 25 ವಿಧಾನ ಪರಿಷತ್ ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ (council election) ನಿಗದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ (BJP Office) ನಡೆದ ಕೋರ್ ಕಮಿಟಿ ಸಭೆಯಲ್ಲಿ (BJP Core Committee) ಮಹತ್ವದ ಚರ್ಚೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ನೇತೃತ್ವದಲ್ಲಿ ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆಯ ಕಸರತ್ತು ನಡೆಯಿತು.

ಬಿಜೆಪಿ ಕೋರ್ ಕಮಿಟಿ ಸಭೆ ಮುಕ್ತಾಯ ನಂತರ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಇವತ್ತು ಕೋರ್ ಕಮಿಟಿ ಸಭೆ ಆಗಿದೆ. 25 ಪರಿಷತ್ ಸ್ಥಾನ ಹಾಗೂ 4 ಪದವೀಧರ ಕ್ಷೇತ್ರಗಳಿಗೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ ಆಗಿದೆ ಎಂದು ತಿಳಿಸಿದರು.
ಕೆಲ ಜಿಲ್ಲೆಗಳಿಂದ ಮಾಹಿತಿ ಕೊಟ್ಟಿದ್ದಾರೆ. ಆ ಮಾಹಿತಿ ಆಧಾರದ ಮೇಲೆ ಇನ್ನು ಎರಡು ಮೂರು ದಿನಗಳಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿ, ಸೆಂಟ್ರಲ್ ಕಮಿಟಿಗೆ ಕಳುಹಿಸುತ್ತೇವೆ ಎಂದರು.