ಇತ್ತೀಚಿನ ಸುದ್ದಿ

ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹ… ನವ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು…

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಂತ್ರ ಮಾಂಗಲ್ಯದ ಮೂಲಕ ಅಂತರ್ಜಾತಿ ವಿವಾಹದ ನವಜೀವನಕ್ಕೆ ಪ್ರೇಮಿಗಳು ಕಾಲಿಟ್ಟಿದ್ದಾರೆ.


ನಂಜನಗೂಡು ಜನ ಸಂಗ್ರಾಮ ಪರಿಷತ್ ವತಿಯಿಂದ ನಂಜನಗೂಡು ನಗರದ ನಂದಿ ಕನ್ವೆನ್ಷನ್ ಹಾಲ್ ನಲ್ಲಿ ಪ್ರೇಮಿಗಳಾದ ಎಂ. ಸಂತೋಷ್ ಕುಮಾರ್ ಹಾಗೂ ಸಿ. ರಂಜಿತಾ ಅವರ ಅಂತರ್ಜಾತಿ ವಿವಾಹವನ್ನು ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು , ರೈತ ದಲಿತ ಸಂಘಟನೆಗಳ ಸಮ್ಮುಖದಲ್ಲಿ ಸರಳವಾಗಿ ವಿವಾಹ ವಾರ್ಷಿಕೋತ್ಸವ ನಡೆಯಿತು.


ನಂಜನಗೂಡು ತಾಲ್ಲೂಕಿನ ಮುಳ್ಳೂರು ಗ್ರಾಮದ ಎಂ. ಸಂತೋಷ್ ಕುಮಾರ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಸಗಾವಿ ಗ್ರಾಮದ ಸಿ. ರಂಜಿತಾ ಖಾಸಗಿ ಕಂಪೆನಿಯೊಂದರಲ್ಲಿ ಸಾಪ್ಟ್ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು,
ಎರಡು ಕುಟುಂಬವನ್ನು ಒಪ್ಪಿಸಿ ಮಂತ್ರ ಮಾಂಗಲ್ಯದ ಮದುವೆಯಾಗುವ ಮೂಲಕ ಮಾದರಿಯಾಗಿದ್ದಾರೆ.
ಇವರಿಗೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹ ಸಂಹಿತೆಯನ್ನು ಮಾನವ ಬಂಧುತ್ವ ವೇದಿಕೆಯ ಮುಖ್ಯಸ್ಥ ಉಗ್ರ ನರಸಿಂಹೇಗೌಡ ಬೋಧಿಸಿದರು. ವಿವಾಹಕ್ಕೆ ಆಗಮಿಸಿದ ಪ್ರಗತಿಪರ ಚಿಂತಕರು ಮತ್ತು ಹೋರಾಟಗಾರರು ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಜನಸಂಗ್ರಾಮ ಪರಿಷತ್ ಗೌರವಾಧ್ಯಕ್ಷ ನಗರ್ಲೆ ಎಂ.ವಿಜಯಕುಮಾರ್, ರಾಜ್ಯ ಉಪಾಧ್ಯಕ್ಷ ಪ್ರಸನ್ನ, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಚುಂಚನಹಳ್ಳಿ ಮಲ್ಲೇಶ್, ತಾಲ್ಲೂಕು ಸಂಚಾಲಕ ಶಂಕರಪುರ ಸುರೇಶ್, ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್, ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಮ್ಮಾವು ರಘು, ಪ್ರತಿಧ್ವನಿ ವೇದಿಕೆ ಜಿಲ್ಲಾಧ್ಯಕ್ಷ ತ್ರಿನೇಶ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಸತೀಶ್ ರಾವ್, ಹಿರಿಯ ದಸಂಸ ಮುಖಂಡ ಗೀಕಹಳ್ಳಿ ಮಹದೇವಸ್ವಾಮಿ, ಮಹೇಶ್ ಸೇರಿದಂತೆ ಪ್ರಗತಿ ಪರ ಚಿಂತಕರು ಮತ್ತು ವಿವಿಧ ಸಂಘಟನೆಗಳ ಹೋರಾಟಗಾರರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button