ರಾಜ್ಯ
ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ವಿಧಾನಸಭಾ ಕ್ಷೇತ್ರದ ತಾವರೆಕೆರೆ ಗ್ರಾಮದಲ್ಲಿ ಮಳೆ ಹಾನಿ ಪೀಡಿತ ಪ್ರದೇಶಕ್ಕೆ ಹೋದಾಗ ರೈತರು ತಮಗಾದ ನಷ್ಟದ ಬಗ್ಗೆ ವಿವರಣೆ ನೀಡಿದರು. ಕೋಲ್ಕತ್ತದಿಂದ ಹೂವಿನ ಗಿಡಗಳನ್ನು ವಿಮಾನದ ಮೂಲಕ ತಂದು ನಾಟಿ ಮಾಡಿ ಬೆಳೆಯಲಾಗಿತ್ತು. ಲಕ್ಷಾಂತರ ರೂ. ಖರ್ಚು ಮಾಡಿದ್ದೇವೆ. ಈ ಹೂವ ವಿದೇಶಗಳಿಗೆ ರಫ್ತಾಗುತ್ತದೆ. ಈ ಬಾರಿ ಮಳೆಯಿಂದಾಗಿ ಬೆಳೆದು ನಿಂತ ಬೆಳೆ ಕೊಳೆತು ಹೋಗಿದೆ. ಹೂವಿನ ಬೆಳೆ ಸಂಪೂರ್ಣ ನಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.
ಬೆಳೆ ನಷ್ಟದ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ ಎಂದು ಸಿದ್ದರಾಮಯ್ಯ ಅಧಿಕಾರಿಗಳನ್ನು ಪ್ರಶ್ನಿಸಿದರು. ಕೃಷಿ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿದ್ದಾರೆ ಎಂದು ಹಿರಿಯ ಅಧಿಕಾರಿ ಮಾಹಿತಿ ನೀಡಿದರು. ಆದರೆ ರೈತರು ಸರ್ಕಾರದಿಂದ ಯಾವುದೇ ಸಮೀಕ್ಷೆಯಾಗಿಲ್ಲ ಎಂದು ಮಾಹಿತಿ ನೀಡಿದರು.