ನಾಳೆ ನಡೆಯಲಿರುವ ಜನಕಲ್ಯಾಣ ಸಮಾವೇಶಕ್ಕೆ ಸಹಸ್ರಾರು ಮಂದಿಗಳು ಪಾಲ್ಗೊಳ್ಳಲು ಕರೆ :ಮಹೇಶ್ ಹಳೆಪುರ

ಚಾಮರಾಜನಗರ:ಡಿ.04 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿ.05ರಂದು ಹಾಸನದ ಎಸ್.ಎಂ.ಕೃಷ್ಣ ನಗರದಲ್ಲಿ ನಡೆಯಲಿರುವ ಜನಕಲ್ಯಾಣ ಸಮಾವೇಶಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜಿಲ್ಲಾ ಅಹಿಂದ ಸಂಘಟನೆಯ ಅಧ್ಯಕ್ಷ ಮಹೇಶ್ ಹಳೆಪುರ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಪತ್ರಿಕೆಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದಾರೆ ಆದರೆ ಇದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮುಖ್ಯಮಂತ್ರಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕುತಂತ್ರ ಮಾಡುತ್ತಿದ್ದಾರೆ ಆದರೆ ಹಿಂದುಳಿದ ಪರವಿರುವ ಸಿದ್ದರಾಮಯ್ಯನವರಿಗೆ ಎಲ್ಲಾ ವರ್ಗದ ಜನರ ಆಶೀರ್ವಾದವಿದ್ದು, ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮುಡ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿ ಅವರು ಈಗಾಗಲೇ 14 ನಿವೇಶನಗಳನ್ನು ಹಿಂತುರುಗಿಸಿದ್ದಾರೆ ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಇರುವುದಿಲ್ಲ ಆದರೆ ಬಿಜೆಪಿ ನಾಯಕರು ಇದನ್ನು ದಾಳವಾಗಿ ಇಟ್ಟುಕೊಂಡು ನಾಟಕವಾಡುತ್ತಿದ್ದಾರೆ ಇದು ಫಲ ಕೊಡುವುದಿಲ್ಲ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೇಕ ಜನಪರ ಕಲ್ಯಾಣ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ಜನರಿಗೆ ತುಂಬಾ ಅನುಕೂಲವಾಗಿವೆ.ಹಾಸನದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಚಾಮರಾಜನಗರದಿಂದ 400 ಬಸ್ಸುಗಳು ಹೊರಡಲಿವೆ ಅಲ್ಲದೆ ವೈಯಕ್ತಿಕವಾಗಿ ಕೆಲ ಸಂಘಟನೆಯ ಮುಖಂಡರು ಬರಲಿದ್ದಾರೆ. ಚಾಮರಾಜನಗರ ಜಿಲ್ಲೆಯಿಂದ ಸುಮಾರು 50ಸಾವಿರಕ್ಕೂ ಹೆಚ್ಚು ಮಂದಿ ಹೊರಡುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಹಿಂದ ರಾಜ್ಯ ಮಹಿಳಾ ಉಪಾಧ್ಯಕ್ಷರಾದ ಕಾವೇರಿ ಶಿವಕುಮಾರ್, ಪದ್ಮ ಪುರುಷೋತ್ತಮ್, ಕಾರ್ಯಧ್ಯಕ್ಷ ಕೆರೆಹಳ್ಳಿ ರಾಜಕುಮಾರ್, ಯಳಂದೂರು ಘಟಕದ ಅಧ್ಯಕ್ಷ ಶ್ರೀನಿವಾಸ್ ಗಣಿಗನೂರು, ಗುಂಡ್ಲುಪೇಟೆ ತಾಲ್ಲೂಕು ಅಧ್ಯಕ್ಷ ಕೆ.ಬಿ.ಉಮೇಶ್, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಮಂಜುನಾಥ್ ಇದ್ದರು.
ವರದಿ: ಇರಸವಾಡಿ ಸಿದ್ದಪ್ಪಾಜಿ ಟಿವಿ8 ನ್ಯೂಸ್ ಕನ್ನಡ ಚಾಮರಾಜನಗರ