ಕ್ರೈಂ

15 ಅಧಿಕಾರಿಗಳ ನಿವಾಸದ ಮೇಲೆ ACB ದಾಳಿ , ಪತ್ತೆಯಾದ ಆಸ್ತಿ ಕಂಡು ಅಧಿಕಾರಿಗಳೇ ದಂಗು

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ 15 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (Anti-Corruption Bureau- ACB) ದಾಳಿ ನಡೆಸಿದೆ. 15 ಅಧಿಕಾರಿಗಳಿಗೆ ಸಂಬಂಧಪಟ್ಟ 60 ಸ್ಥಳಗಳ ಮೇಲೆ ನಡೆದ ಈ ದಾಳಿಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು, ಆಸ್ತಿ ಪತ್ರಗಳು ಪತ್ತೆಯಾಗಿವೆ. 

ದಾಳಿಯಲ್ಲಿ 100 ಅಧಿಕಾರಿಗಳು ಭಾಗಿ : 
ಕರ್ನಾಟಕ ಸರ್ಕಾರದ 15 ಅಧಿಕಾರಿಗಳ ವಿರುದ್ಧ ನಡೆದ ದಾಳಿಯಲ್ಲಿ 8 ಎಸ್ಪಿಗಳು, 100 ಅಧಿಕಾರಿಗಳು ಮತ್ತು 300 ನೌಕರರು ಪಾಲ್ಗೊಂಡಿದ್ದರು. ಭ್ರಷ್ಟಾಚಾರ ನಿಗ್ರಹ ದಳದ (ACB) ತಂಡವು ಸರ್ಕಾರಿ ಅಧಿಕಾರಿಗಳಿಗೆ ಸೇರಿದ 60 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದೆ. ಶೋಧದ ನಂತರ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button