ರಾಜ್ಯ
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್
ಬೆಳಗಾವಿ/ಬೆಂಗಳೂರು: ಹೊಸ ರೂಪಾಂತರಿ ಒಮಿಕ್ರೋನ್ ಕೋವಿಡ್ ಆತಂಕ ಹಿನ್ನೆಲೆ ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ ಆಗಮಿಸುವ ಪ್ರಯಾಣಿಕರಿಗೆ ವ್ಯಾಕ್ಸಿನ್ ಮತ್ತು ಕೋವಿಡ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಬಳಿಯಿರುವ ಕೋಗನೊಳ್ಳಿ ಚೆಕ್ ಪೋಸ್ಟ್ನಲ್ಲಿ ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ. ಮಹಾರಾಷ್ಟ್ರದಿಂದ ಬರುವ ಎಲ್ಲಾ ಪ್ರಯಾಣಿಕರಿಗೆ ಕೋವಿಡ್ ತಪಾಸಣೆ ನಡೆಸುತ್ತಿದ್ದು, ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಗಡಿಯೊಳಗೆ ಪ್ರವೇಶ ಕಲ್ಪಿಸಲಾಗುತ್ತಿದ್ದು, ಲಸಿಕೆ ಪಡೆಯದಿರುವ ಪ್ರಯಾಣಿಕರನ್ನು ಮರಳಿ ಮಹಾರಾಷ್ಟಕ್ಕೆ ಹಿಂದಿರುಗಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದೆರಡು ವರ್ಷಗಳಿಂದ ಕೊರೊನಾದಿಂದ ಇಡೀ ದೇಶ ನಲುಗಿದ್ದು, ರೂಪಾಂತರಿ ವೈರಸ್ ರಾಜ್ಯಕ್ಕೆ ಬರದಂತೆ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ.