ಟ್ವಿಟ್ಟರ್ ಬಳಕೆದಾರ ಮತ್ತು ಯೂಟ್ಯೂಬ್ ಇನ್ಫ್ಲುಯೆನ್ಸರ್ ಒಬ್ಬರು ಸಾಮಾಜಿಕ ಜಾಲತಾಣಗಳಲ್ಲಿ ತನ್ನನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಬಾಲಿವುಡ್ ನಟಿ ಸ್ವರಾ ಭಾಸ್ಕರ್ (Swara Bhasker) ಆರೋಪಿಸಿದ್ದಾರೆ. ಅಲ್ಲದೆ, ತನ್ನ ವಿರುದ್ಧ ಕೆಲವು ಸಂದೇಶಗಳನ್ನು ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೆಲವು ಚಲನಚಿತ್ರ ದೃಶ್ಯಗಳಿಗೆ ಸಂಬಂಧಿಸಿದಂತೆ ಕೆಲವು ಹ್ಯಾಶ್ ಟ್ಯಾಗ್‌ಗಳನ್ನು ಸಹ ಹಾಕಿ ಪ್ರಸಾರ ಮಾಡಲಾಗಿದೆ ಎಂದು ನಟಿ ದೂರಿದ್ದಾರೆ. ಈ ದೂರಿನ ಆಧಾರದ ಮೇಲೆ ದೆಹಲಿಯ ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ (Criminal Case) ದಾಖಲಿಸಲಾಗಿದೆ ಮತ್ತು ತನಿಖೆ ಕೈಗೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಸೆಕ್ಷನ್‌ಗಳಾದ 354 ಡಿ, 509 ಐಪಿಸಿ ಮತ್ತು 67 ಐಟಿ ಕಾಯ್ದೆಗಳನ್ನು ವಿಧಿಸಲಾಗಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
YouTube influencer ಹಾಗೂ ಟ್ವಿಟ್ಟರ್ ಬಳಕೆದಾರ ಸಾಮಾಜಿಕ ಮಾಧ್ಯಮದ ವೇದಿಕೆಗಳಲ್ಲಿ ತನ್ನ ತಾಳ್ಮೆಯನ್ನು ಮೀರಿಸುವ ಉದ್ದೇಶದಿಂದ ಕೆಲವು ಸಂದೇಶಗಳನ್ನು ಪ್ರಸಾರ ಮಾಡುತ್ತಿದ್ದಾರೆ. ಚಲನಚಿತ್ರದ ದೃಶ್ಯವೊಂದಕ್ಕೆ ಸಂಬಂಧಿಸಿದಂತೆ ಕೆಲವು ಹ್ಯಾಶ್ ಟ್ಯಾಗ್‌ಗಳನ್ನು ಕ್ರಿಯೇಟ್ ಮಾಡಿ ಟ್ರೆಂಡಿಂಗ್ ಮಾಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಈ ಕುರಿತಾಗಿ ನೈರುತ್ಯ ವಲಯದ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಗೌರವ್ ಶರ್ಮಾ ಮಾಹಿತಿ ನೀಡಿದ್ದಾರೆ.