ಕ್ರೈಂ
ಮಾನವ ಕಳ್ಳಸಾಗಣೆ ಜಾಲ ಬೆಳಕಿಗೆ..!
ಬೆಂಗಳೂರು: ನಗರದಲ್ಲಿ ಮತ್ತೊಂದು ಮಾನವ ಕಳ್ಳಸಾಗಣೆ ಜಾಲ ಬೆಳಕಿಗೆ ಬಂದಿದ್ದು, ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ಬಂಧಿಸಲಾಗಿದೆ. ಮುಂಬೈ ಮೂಲದ ಜ್ಯೋತಿ ಬಂಧಿತ ಆರೋಪಿ.
ಆರೋಪಿ, ಕೆಲಸದ ಅಮಿಷವೊಡ್ಡಿ ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಇಬ್ಬರನ್ನು ಕರೆತಂದಿದ್ದು, ನಗರದಲ್ಲಿ ವೇಶ್ಯಾವಾಟಿಕೆಗೆ ದಂಧೆಗೆ ದೂಡಿದ್ದಳು. ಈ ಬಗ್ಗೆ ಮಾಹಿತಿ ಸಂಗ್ರಹಿಸಿದ ಎನ್ಜಿಒ ಸಂಸ್ಥೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕೊಡಿಗೆಹಳ್ಳಿ ಪೊಲೀಸರು ದಾಳಿ ನಡೆಸಿ ಮಹಿಳೆ ಹಾಗೂ ಅಪ್ರಾಪ್ತೆಯನ್ನು ರಕ್ಷಿಸಿದ್ದಾರೆ.
ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದು,ಪಾಸ್ ಪೋರ್ಟ್ ಮತ್ತು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಬಂಧಿತ ಆರೋಪಿ ಜ್ಯೋತಿ ವಿಚಾರಣೆ ನಡೆಸಿದ್ದು, ಫೋನ್ ಕಾಲ್ ಮೂಲಕ ಗ್ರಾಹಕರನ್ನು ಸಂಪರ್ಕಿಸಿ ದಂಧೆ ನಡೆಸುತ್ತಿದ್ದ ಬಗ್ಗೆ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.