Gold Rate on October 29, 2021: ದೇಶದಲ್ಲಿ ಚಿನ್ನದ ಬೆಲೆ (Gold Price) ಯಲ್ಲಿ ಮತ್ತಷ್ಟು ಇಳಿಕೆಯಾಗಿದ್ದು, ಆಭರಣ ಪ್ರಿಯರ ಮೊಗದಲ್ಲಿ ಖುಷಿ ತಂದಿದೆ. ಆದರೆ, ಬೆಂಗಳೂರಿನಲ್ಲಿ (Bengaluru) ಇಂದು ಚಿನ್ನದ ಬೆಲೆ ಏರಿಕೆಯಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 200 ರೂ. ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 47,130 ರೂ. ಇತ್ತು. ಇಂದು ಮತ್ತಷ್ಟು ಇಳಿಕೆಯಾಗಿ (Gold Price Reduced) 47,050 ರೂ. ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 48,130 ರೂ. ಇತ್ತು. ಇಂದು 80 ರೂ. ಇಳಿಕೆಯಾಗಿ 48,050 ರೂ. ಆಗಿದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ..?
ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 49,040 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,950 ರೂ. ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಆಭರಣ ಪ್ರಿಯರಿಗೆ ಶುಭ ಸುದ್ದಿ
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 49,360 ರೂ.ಇದ್ದರೆ, ಮುಂಬೈನಲ್ಲಿ 48,050 ರೂ., ದೆಹಲಿಯಲ್ಲಿ 51,380 ರೂ. ಹಾಗೂ ಕೋಲ್ಕತ್ತದಲ್ಲಿ 50,050 ರೂ. ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಶಿಕ್ನಲ್ಲೂ ಹೆಚ್ಚೂ ಕಡಿಮೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.