ರಾಜ್ಯ
ಮತ್ತೆ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ: ಜನಸಾಮಾನ್ಯರಿಗೆ ಶಾಕ್ ಕೊಟ್ಟ ಸರ್ಕಾರ..!
ನವದೆಹಲಿ(ಅ.06): ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನ್ಕಕೇರುತ್ತಲೇ ಇದೆ. ಗೃಹೋಪಯೋಗಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಕಂಗಾಲಾಗಿ ಹೋಗಿದ್ದಾರೆ. ಪೆಟ್ರೋಲ್-ಡೀಸೆಲ್ (Petrol-Diesel Price) ಹಾಗೂ ಅಡುಗೆ ಎಣ್ಣೆ ಬೆಲೆ (Cooking Oil Price)ಯೂ ಹೆಚ್ಚಾಗುತ್ತಿದೆ.
ದಿನಬಳಕೆಯ ಗ್ಯಾಸ್ ಸಿಲಿಂಡರ್(LPG Cylinder Price) ಬೆಲೆಯನ್ನು ಏರಿಸುತ್ತಿರುವ ಕೇಂದ್ರ ಸರ್ಕಾರ(Union Government) ಗ್ರಾಹಕರಿಗೆ ಬೆಲೆ ಏರಿಕೆಯ ಬರೆ ಹಾಕಿದೆ. ಪ್ರತಿದಿನ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್(LPG Price Hike) ಬೆಲೆಯನ್ನು ಈ ತಿಂಗಳು 15 ರೂಪಾಯಿ ಹೆಚ್ಚು ಮಾಡುವ ಮೂಲಕ ಜನಸಾಮಾನ್ಯರಿಗೆ ಶಾಕ್ ನೀಡಿದೆ.
ಬುಧವಾರ ಎಲ್ಪಿಜಿ ಸಿಲಿಂಡರ್ ಬೆಲೆ 15 ರೂಪಾಯಿ ಹೆಚ್ಚಾಗಿದೆ. ಕಳೆದ 2 ತಿಂಗಳಲ್ಲಿ ಸತತ ನಾಲ್ಕನೇ ಬಾರಿಗೆ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿದೆ. ಹೊಸ ಪರಿಷ್ಕೃತ ದರಗಳು ಇಂದಿನಿಂದಲೇ ಜಾರಿಯಾಗಲಿವೆ.