ಹಾಲಿನ ದರ ಪ್ರತಿ ಲೀ. 5 ರೂ ಹೆಚ್ಚಳಕ್ಕೆ KMF ಸಿದ್ಧತೆ –

ಬೆಂಗಳೂರು: ವಿದ್ಯುತ್, ಮೆಟ್ರೋ ರೈಲು ಮತ್ತು ಬಸ್ ದರ ಹೆಚ್ಚಳದ ಬೆನ್ನಲ್ಲೇ ರಾಜ್ಯ ಬಜೆಟ್ ನಂತರ ಮತ್ತೆ ಪ್ರತಿ ಲೀಟರ್ ಹಾಲಿನ ದರವನ್ನು 5 ರು. ಹೆಚ್ಚಿಸಲು ಕೆಎಂಎಫ್ ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ನಂದಿನಿ ಹಾಲಿನ ದರ ಏರಿಕೆಗೆ ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿದ್ದು, ಬೆಲೆ ಏರಿಕೆ ಅಂತಿಮ ನಿರ್ಧಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ ಕೈಗೊಳ್ಳಬೇಕಿದೆ.
ಮಾರ್ಚ್ ನಿಂದ ಪರಿಷ್ಕ್ರತ ದರ ಜಾರಿಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರವನ್ನು 5 ರೂ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ ಕೂಡಲೇ ದರ ಹೆಚ್ಚಳ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುಳಿವು ನೀಡಿದ್ದರು.
ರಾಜ್ಯದಲ್ಲಿ ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಚರ್ಚೆಯಾಗುತ್ತಲೇ ಇದೆ. ರೈತರು ಹಾಗೂ ಹಾಲು ಒಕ್ಕೂಟಗಳು ಪ್ರತಿ ಲೀಟರ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆ ಮಾಡುವಂತೆ KMF ಗೆ ಮನವಿ ಮಾಡಿವೆ. ಕಳೆದ ಜೂನ್ ನಲ್ಲಿ ಹಾಲಿನ ಪ್ರಮಾಣ ಹೆಚ್ಚಳ ಮಾಡಿ ಪ್ರತಿ ಲೀಟರ್ ಹಾಲಿನ ದರ ಎರಡು ರೂಪಾಯಿಯಷ್ಟು ಹೆಚ್ಚಳ ಮಾಡಲಾಗಿತ್ತು