BEL Recruitment 2021: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(Bharath Electronics Limited)ನಲ್ಲಿ 80 ಡಿಪ್ಲೋಮಾ ಅಪ್ರೆಂಟಿಸ್(Diploma Apprentice) ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ(Diploma Holders) ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಕ್ಟೋಬರ್ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ನವೆಂಬರ್ 15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಬಿಇಎಲ್(BEL)ನ ಅಧಿಕೃತ ವೆಬ್ಸೈಟ್ bel-india.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.
ಸಂಸ್ಥೆ | ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ |
ಜಾಹೀರಾತು ಸಂಖ್ಯೆ | 12930/64/HRD/GAD/07 |
ಹುದ್ದೆಯ ಹೆಸರು | ಡಿಪ್ಲೋಮಾ ಅಪ್ರೆಂಟಿಸ್ |
ಒಟ್ಟು ಹುದ್ದೆಗಳು | 80 |
ವಿದ್ಯಾರ್ಹತೆ | ಡಿಪ್ಲೋಮಾ |
ಉದ್ಯೋಗದ ಸ್ಥಳ | ಘಾಜಿಯಾಬಾದ್ |
ಸಂಬಳ | ಮಾಸಿಕ ₹10,400 |
ಅರ್ಜಿ ಸಲ್ಲಿಸುವ ವಿಧಾನ | ಆನ್ಲೈನ್ |
ಅರ್ಜಿ ಸಲ್ಲಿಕೆ ಆರಂಭ ದಿನಾಂಕ | 25/10/2021 |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 15/11/2021 |