ಏ.20 ರಂದು ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ವಿಚಾರ ಸಂಕಿರಣ: ಡಾ. ವಿ.ಎನ್. ಮಹದೇವಯ್ಯ

ಚಾಮರಾಜನಗರ : ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ಅವರ ಜನ್ಮದಿನದ ಪ್ರಯುಕ್ತ ಅವರ ಅಭಿಮಾನಿಗಳ ಬಳಗದ ವತಿಯಿಂದ ಏ.20 ರಂದು ನಗರದಲ್ಲಿ ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎಂಬ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಅಭಿಮಾನಿಗಳ ಬಳಗದ ಅಧ್ಯಕ್ಷ ಡಾ.ವಿ.ಎನ್.ಮಹದೇವಯ್ಯ ತಿಳಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ವಿಚಾರ ಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಲಿದ್ದಾರೆ. ಚನ್ನಲಿಂಗನಹಳ್ಳಿ ಜೇತವನ ಬುದ್ದವಿಹಾರದ ಬಂತೆ ಮನೋರಖ್ಖಿತ ಭಂತೇಜಿ ದಿವ್ಯ ಸಾನಿಧ್ಯ ವಹಿಸಿಲಿದ್ದಾರ.
ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದು, ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12 ರಿಂದ 1.30 ರ ತನಕ ಹಾಗೂ ಮಧ್ಯಾಹ್ನ 2.30 ರಿಂದ 4 ಗಂಟೆಯವರೆಗೆ ವಿಚಾರಗೋಷ್ಟಿ ನಡೆಯಲಿದೆ ಎಂದು ತಿಳಿಸಿದರು.
ವಿಚಾರಗೋಷ್ಟಿ ಬಳಿಕ ಸಮಾರೋಪ ಸಮಾರಂಭದ ಸಾನಿಧ್ಯವನ್ನು ಮೈಸೂರಿನ ವಿಶ್ವಮೈತ್ರಿ ಬುದ್ಧವಿಹಾರದ ಬಂತೆ ಡಾ.ಕಲ್ಯಾಣಸಿರಿ ವಹಿಸಲಿದ್ದಾರೆ. ಶಾಸಕ ಎ.ಆರ್.ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ಸಂಸದ ಸುನೀಲ್ಬೋಸ್, ಶಾಸಕ ಎಚ್.ಎಂ.ಗಣೇಶ್ಪ್ರಸಾದ್ ಭಾಗವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಡಾ. ಡಿ. ತಿಮ್ಮಯ್ಯ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ ಎಂದರು.
ದಸಂಸ ಮುಖಂಡ ಕೆ.ಎಂ.ನಾಗರಾಜು ಮಾತನಾಡಿ, ಡಾ.ಎಚ್.ಸಿ.ಮಹದೇವಪ್ಪ ಅವರು ದಲಿತ ಸಂಘಟನೆಗಳ ಮೂಲಕ ರಾಜಕೀಯಕ್ಕೆ ಬಂದಿದ್ದಾರೆ. ಇವರ ಮೇಲೆ ಯಾವುದೇ ಹಗರಣವಿಲ್ಲ. ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಬಳಿಕ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆಯನ್ನು ಅಳವಡಿಸುವ ಕೆಲಸ ಮಾಡಿದ್ದಾರೆ. ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ಉಳಿಸುವ ವ್ಯಕ್ತಿಯಾಗಿದ್ದಾರೆ. ಆದ್ದರಿಂದ ಅಂದು ನಡೆಯುವ ವಿಚಾರ ಸಂಕಿರಣದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪಂ.ಮಾಜಿ ಸದಸ್ಯ ಕಮಲ್ ಎನ್. ನಾಗರಾಜ್, ಕೆ.ಎಂ.ನಾಗರಾಜು, ಹೊನ್ನೂರು ರಾಜೇಂದ್ರ, ಕೆಸ್ತೂರು ಚಿನ್ನಸ್ವಾಮಿ, ದೊಡ್ಡರಾಯಡಪೇಟೆ ಸಿದ್ದರಾಜು, ಪಿ.ಸಂಘಸೇನಾ, ಉತ್ತಂಬಳ್ಳಿ ಲಿಂಗಣ್ಣ ಇದ್ದರು.
ವರದಿ : ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ