ದೇಶ
ಬಿಜೆಪಿ ಮುಖಂಡ ಎನ್.ಆರ್ ರಮೇಶ್ ವಿರುದ್ಧ ಮತ್ತೊಂದು FIR..!
ಕೊರೊನಾ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಮುಖಂಡ ಎನ್.ಆರ್ ರಮೇಶ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
ಎನ್.ಆರ್ ರಮೇಶ್ ಜನವರಿ 14ರಂದು ರಾಯಪುರ ವಾರ್ಡ್ನ ಬಿಬಿಎಂಪಿ ಕಟ್ಟಡದಲ್ಲಿ ತಮ್ಮದೇ ಸರ್ಕಾರ ಜಾರಿ ಮಾಡಿದ್ದ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಮಾಜಿ ಕಾರ್ಪೋರೇಟರ್ ಎನ್.ಆರ್ ರಮೇಶ್ ವಿರುದ್ಧ ಜಗಜೀವನ್ ರಾಮ್ ನಗರ ಪೊಲೀಸ್ ಠಾಣೆಯಲ್ಲಿ ಎರಡನೇ ಎಫ್ಐಆರ್ ದಾಖಲಾಗಿದೆ.
ಈ ಹಿಂದೆ ಎನ್.ಆರ್ ರಮೇಶ್ ಮನೆ ಸಮೀಪದಲ್ಲಿ ಬರ್ತ್ಡೇ ಆಚರಿಸಿಕೊಂಡ ಕಾರಣ ಬನಶಂಕರಿ ಪೊಲೀಸ್ ಠಾಣೆಯಲ್ಲೂ ಎಫ್ಐಆರ್ ದಾಖಲಾಗಿತ್ತು.