ಸಿನಿಮಾ

ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲು

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಇದೀಗ ಸಂಕಷ್ಟಕ್ಕೆ ಸಿಲುಕಿದೆ . ಬೆಂಗಳೂರಿನ ಎಚ್​ಎಂಟಿ ಕಾರ್ಖಾನೆ ಬಳಿ ಬೃಹತ್ ಸೆಟ್ ನಿರ್ಮಾಣ ಮಾಡಿ ತಿಂಗಳುಗಳ ಕಾಲ ಟಾಕ್ಸಿಕ್ ಸಿನಿಮಾದ ಶೂಟಿಂಗ್ ಮಾಡಲಾಗಿತ್ತು. ಆದರೆ ಇತ್ತೀಚೆಗೆ ‘ಟಾಕ್ಸಿಕ್’ ಸಿನಿಮಾ ತಂಡ, ಸೆಟ್ ನಿರ್ಮಾಣ ಮಾಡಲು ಮರಗಳನ್ನು ಕಡಿದು ನಾಶ ಮಾಡಿದೆ ಎಂಬ ಆರೋಪ ಕೇಳಿ ಬಂದಿತ್ತು.

ವಕೀಲರೊಬ್ಬರು ಈ ಬಗ್ಗೆ ದೂರು ದಾಖಲಿಸಿದ್ದರು. ಇತ್ತೀಚೆಗೆ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರಲ್ಲದೆ, ಎಚ್​ಎಂಟಿ ಕೆಲ ನಿಯಮಗಳನ್ನು ಮುರಿದಿದೆ ಎಂಬ ಆರೋಪವೂ ಕೇಳಿ ಬಂದಿತ್ತು. ಇದೀಗ ‘ಟಾಕ್ಸಿಕ್’ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮರಗಳನ್ನು ಕಡಿದ ಆರೋಪದಲ್ಲಿ ನ್ಯಾಯಾಲಯದ ಸೂಚನೆಯಂತೆ ‘ಟಾಕ್ಸಿಕ್’ ಸಿನಿಮಾದ ನಿರ್ಮಾಣ ಸಂಸ್ಥೆಗಳಾದ ಕೆವಿಎನ್ ಹಾಗೂ ಯಶ್ ​ರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್​​ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಹಾಗೂ ಹೆಚ್​ಎಂಟಿ ಲಿಮಿಟೆಡ್ ವಿರುದ್ಧವೂ ಸಹ ಎಫ್​ಐಆರ್ ದಾಖಲಾಗಿದೆ. ಅರಣ್ಯ ಕಾಯ್ದೆಯ ಅಡಿಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಆರೋಪಿಗಳಿಗೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುವ ಸಾಧ್ಯತೆ ಇದೆ.

ಕಳೆದ ಕೆಲ ತಿಂಗಳಿಂದಲೂ ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣವಾಗಿರುವ ಜಾಗ ಮತ್ತು ಮರ ಕಡಿದಿರುವ ಕುರಿತು ವಿವಾದಗಳು ಚಾಲ್ತಿಯಲ್ಲಿವೆ. ಅರಣ್ಯ ಸಚಿವ ಈಶ್ವರ ಖಂಡ್ರೆಯವರು, ಎಚ್​ಎಂಟಿ ತನಗೆ ನೀಡಲಾಗಿದ್ದ ಜಾಗವನ್ನು ಸಿನಿಮಾಗಳಿಗೆ ಬಾಡಿಗೆ ನೀಡಿ ಹಣ ಮಾಡುತ್ತಿದೆ ಎಂದು ಆರೋಪಿಸಿತ್ತು. ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಮಾಡಿದ ಜಾಗದಲ್ಲಿ ಮುಂಚೆ ಇದ್ದ ಮರಗಳು ಆ ನಂತರ ನಾಶವಾದ ಮರಗಳ ಮಾಹಿತಿ ಒದಗಿಸುವ ಸ್ಯಾಟಲೈಟ್ ಚಿತ್ರವನ್ನು ಸಹ ಬಿಡುಗಡೆ ಮಾಡಲಾಗಿತ್ತು.

ಬಳಿಕ ಈ ಆರೋಪಗಳಿಗೆ ಸ್ಪಂದಿಸಿದ್ದ ಎಚ್​ಎಂಟಿ, ‘ಟಾಕ್ಸಿಕ್’ ಸಿನಿಮಾದ ಸೆಟ್ ನಿರ್ಮಾಣ ಆಗಿರುವ ಸ್ಥಳ ನಮ್ಮದಲ್ಲ, ಅದು ಕೆನರಾ ಬ್ಯಾಂಕ್​ಗೆ ಸೇರಿದ್ದು, ಕೆನರಾ ಬ್ಯಾಂಕ್​ಗೆ ಸೇರಿದ ಸ್ಥಳವನ್ನು ನಾವು ಬಾಡಿಗೆಗೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದಿತ್ತು. ಚಿತ್ರತಂಡ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮರ ಕಡಿದಿರುವ ಆರೋಪಗಳನ್ನು ತಳ್ಳಿ ಹಾಕಿತ್ತು.

ಪುಣ್ಯ ಗೌಡ ಫಿಲಂ ಬ್ಯೂರೋ tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button