ದೇಶ

ಡಿ.ವಿ.ಗುಂಡಪ್ಪ

ಬಾಲ್ಯ ಜೀವನ

ಡಿ.ವಿ.ಜಿ ಅವರು ೧೮೮೭, ಮಾರ್ಚ್ ೧೭ರಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ದೇವನಹಳ್ಳಿಯಲ್ಲಿ ಜನಿಸಿದರು. ಅವರ ಪೂರ್ವಿಕರು ತಮಿಳುನಾಡಿನ ತಿರುಚಿನಾಪಳ್ಳಿಯ ಕಡೆಯವರು. ಅವರ ಮುತ್ತಜ್ಜ ಕೋಲಾರ ಜಿಲ್ಲೆಯ ಮುಳಬಾಗಿಲಿಗೆ ವಲಸೆ ಬಂದವರು. ಶೇಕದಾರ ಕುಟುಂಬದ ಗುಂಡಪ್ಪನವರು ೧೮೯೮ ರಲ್ಲಿ ಕನ್ನಡ ಲೋಯರ್ ಸೆಕೆಂಡರಿ ಪರೀಕ್ಷೆಯಲ್ಲಿ ಪಾಸಾದರು. ಆ ಸಂದರ್ಭದಲ್ಲೇ ಸಿಕ್ಕ ಇಂಗ್ಲಿಷ್ ಶಿಕ್ಷಣವನ್ನು ಪಡೆದರು. ಖಾಸಗಿಯಾಗಿ ಸಂಸ್ಕೃತವನ್ನು ಅಭ್ಯಾಸ ಮಾಡಿದರು. ಮುಂದೆ ಸಂಬಂಧಿಕರೊಬ್ಬರ ಸಹಾಯದಿಂದ ಮೈಸೂರಿನ ಮಹಾರಾಜ ಪ್ರೌಢಶಾಲೆಯಲ್ಲಿ ಶಿಕ್ಷಣ ಪಡೆದರು. ಆದರೆ ೧೯೦೫ ರಲ್ಲಿ ಮೆಟ್ರಿಕ್ಯುಲೇಷನ್ ನಲ್ಲಿ ತೇರ್ಗಡೆಯಾಗಲಿಲ್ಲ. ಅಲ್ಲಿಗೆ ಶಾಲಾ ಶಿಕ್ಷಣವನ್ನು ನಿಲ್ಲಿಸಿದರು.

ವೃತ್ತಿ ಜೀವನ

ಪ್ರೌಢಶಾಲೆಯಲ್ಲಿ ಓದುವಾಗಲೇ ಗುಂಡಪ್ಪನವರಿಗೆ ಮದುವೆಯಾಯಿತು. ಹೆಂಡತಿ ಭಾಗೀರಥಮ್ಮ. ಮುಂದೆ ಮುಳಬಾಗಿಲಿನ ಒಂದು ಶಾಲೆಯಲ್ಲಿ ಬದಲಿ ಅಧ್ಯಾಪಕರಾಗಿ ಕೆಲ ಕಾಲ ಕೆಲಸ ಮಾಡಿದರು. ಅದೇ ಅವರ ವೃತ್ತಿ ಜೀವನದ ನಾಂದಿ. ಆದರೂ ಅಲ್ಲಿರಲಾಗಲಿಲ್ಲ. ವೃತ್ತಿ ಬಿಟ್ಟು ಮುಂದೆ ಕೋಲಾರದ ಚಿನ್ನದ ಗಣಿಯಲ್ಲಿ, ಸೋಡಾ ಫ್ಯಾಕ್ಟರಿಯಲ್ಲಿ, ಕೆಲಸ ಮಾಡಿದರು. ನಂತರ ಬೆಂಗಳೂರಿಗೆ ಬಂದು ಕೆಲಸಕ್ಕಾಗಿ ಎಲ್ಲೆಂದರಲ್ಲಿ ಅಲೆದರು. ಪತ್ರಿಕೋದ್ಯಮ ಜೀವನ ನಿರ್ವಹಣೆಗಾಗಿ ಏನಾದರೂ ಮಾಡಬೇಕಿದ್ದ ಗುಂಡಪ್ಪನವರು “ಸೂರ್ಯೋದಯ ಪ್ರಕಾಶಿಕ” ಪತ್ರಿಕೆಯಲ್ಲಿ ಬಾತ್ಮೀದಾರರಾಗಿ ಸೇರಿಕೊಂಡರು. ಹೆಚ್ಚು ಕಾಲ ಈ ಪತ್ರಿಕೆ ನಡೆಯಲಿಲ್ಲ. ಪುನಃ ಮತ್ತೊಂದಕ್ಕೆ ಗುಂಡಪ್ಪನವರ ಹೆಜ್ಜೆ, ಖರ್ಚಿಗಾಗಿ ಏನಾದರೂ ಬರೆಯಬೇಕಿತ್ತು. ಯಾವುದಾದರೂ ಪತ್ರಿಕೆ ಬೇಕಿತ್ತು. ಹಲವಾರು ಇಂಗ್ಲಿಷ್ ಪತ್ರಿಕೆಗಳಿಗೆ ಲೇಖನ ಬರೆದರು. ಕನ್ನಡ ಪತ್ರಿಕೆಗಳಲ್ಲಿ ಅನುಭವ ಪಡೆದರು. “ವೀರಕೇಸರಿ” ಯಲ್ಲಿ ಕಾರ್ಯ ನಿರ್ವಹಿಸಲು ಮದ್ರಾಸ್ ಗೆ ಹೋದಾಗ ಅಲ್ಲಿ “ಹಿಂದೂ” ಪತ್ರಿಕೆಗೆ ಬರೆದರು. ನಂತರ “ಮೈಸೂರು ಟೈಮ್ಸ್” ಇಂಗ್ಲಿಷ್ ಪತ್ರಿಕೆಯ ಸಹಾಯಕ ಸಂಪಾದಕರಾದರು.

ಸಾಹಿತ್ಯ ಕೃಷಿ

ದಿವಾನ್ ರಂಗಾಚಾರ್ಯ ಅವರ ಬಗ್ಗೆ ಇಂಗ್ಲಿಷಿನಲ್ಲಿ ಬರೆದ ಲೇಖನ ಡಿ.ವಿ.ಜಿ ಅವರ ಬದುಕಲ್ಲಿ ಹೊಸ ತಿರುವು ಪಡೆಯಿತು. ಮುಂದೆ ಪುಸ್ತಕ ರೂಪಕ್ಕೆ ತರಲು ಹಲವು ಮಾರ್ಪಾಡು ಮಾಡಿದರು. ಇದು ಪ್ರಕಟವಾಗುತ್ತಿದ್ದಂತೆ ಕೃತಿ ಪ್ರಕಟಣೆ ಮೂಲಕವೂ ಹಣ ಬರುವಂತಾಯಿತು. ಲೇಖನ, ಪರಿಚಯದ ಜೊತೆ ಕಾವ್ಯ ಕೃಷಿ ಪ್ರಧಾನವಾಯಿತು. ಅನುವಾದ ಸಾಹಿತ್ಯದ ಮೂಲಕ ಡಿ ವಿ ಜಿ ಉತ್ತಮ ಹೆಸರು ಪಡೆದರು. ರಾಜಕೀಯ ವಿಶ್ಲೇಷಣೆ, ತತ್ತ್ವಶಾಸ್ತ್ರ, ಧಾರ್ಮಿಕ ವಿಚಾರಗಳು, ಪ್ರಬಂಧ ಬರಹ, ಬೇರೆ ಬೇರೆ ಮಗ್ಗಲುಗಳಾದವು.

ಕನ್ನಡ ಕಾವ್ಯಕ್ಷೇತ್ರದಲ್ಲಿ “ಮಂಕುತಿಮ್ಮನ ಕಗ್ಗ”ಹಾಗೂ “ಮರುಳ ಮುನಿಯನ ಕಗ್ಗ” ದ ಮೂಲಕ ಡಿ ವಿ ಜಿ ಮನೆಮಾತಾದವರು:

“ಬದುಕು ಜಟಕಾಬಂಡಿ, ವಿಧಿಯದರ ಸಾಹೇಬ ಕುದುರೆ ನೀನ್, ಅವನು ಪೇಳ್ದಂತೆ ಪಯಣಿಗರು ಮದುವೆಗೋ ಮಸಣಕೋ ಹೋಗೆಂದ ಕಡೆಗೋಗು ಪದ ಕುಸಿಯೆ ನೆಲವಿಹುದು- ಮಂಕುತಿಮ್ಮ ”

ಈ ಕೃತಿ ಕನ್ನಡದ ಭಗವದ್ಗೀತೆಯೆಂದೇ ಹಲವರು ಭಾವಿಸುವಂತಹ ಉತ್ಕೃಷ್ಟ ಸಂಕಲನ. “ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು” ಎಂದ ಡಿ ವಿ ಜಿ, ಕವಿ ಪರಂಪರೆ ಹಾಗೂ ವಿಜ್ಞಾನ ನಂಬಿಕೆಗೆ ಕೊಂಡಿ ಬೆಸೆದವರು. ಹಳೆಯದನ್ನು ಬಿಡಲಾರದ ಹೊಸತು ವಿಜ್ಞಾನ ಸೃಷ್ಟೀಕರಿಸಲಾಗದ ಭಾರತೀಯ ಮನಸ್ಸುಗಳನ್ನು ಒಂದಾಗಿಸುವ ವಿಚಾರಲಹರಿಯನ್ನು ಕಾವ್ಯ ಮುಖೇನ ನೀಡಿದ ಡಿ ವಿ ಜಿ ಪತ್ರಕರ್ತರಾಗಿಯೂ ಹೆಸರಾದವರು. ವ್ಯಕ್ತಿ ವಿಚಾರದ ಬರಹಗಳಿಂದ ನಾಲ್ಕು ಕಾಲ ನೆನಪಲ್ಲಿರುವವರು. ಹೀಗಾಗಿ ಅವರ “ಮಹನೀಯರು”, “ಜ್ಞಾಪಕ ಚಿತ್ರಶಾಲೆ” ಮಹತ್ವದ ವಿಚಾರಗಳನ್ನು ಹೊರಚೆಲ್ಲಿದ ಕೃತಿಗಳು.

ಕವಿತೆಗಳು

  • ನಿವೇದನ (1942)
  • ಉಮರನ ಒಸಗೆ
  • ಮಂಕುತಿಮ್ಮನ ಕಗ್ಗ – I
  • ಮರುಳ ಮುನಿಯನ ಕಗ್ಗ – II
  • ಶ್ರೀರಾಮ ಪರೀಕ್ಷಣಂ
  • ಅ೦ತಃಪುರಗೀತೆ
  • ಗೀತ ಶಾಕುಂತಲಾ
  • ಜ್ಞಾಪಕ ಚಿತ್ರಶಾಲೆ

ನಿಬಂಧ

  • ಜೀವನ ಸೌಂದರ್ಯ ಮತ್ತು ಸಾಹಿತ್ಯ
  • ಸಾಹಿತ್ಯ ಶಕ್ತಿ
  • ಸಂಸ್ಕೃತಿ
  • ಬಾಳಿಗೊಂದು ನಂಬಿಕೆ
  • ಜೀವವನಧರ್ಮ ಯೋಗ (ದೈನಂದಿನ ಜೀವನದ ಯೋಗ)-(ಗೀತೆಯ ಮೇಲೆ ಪ್ರವಚನ ಸಂಗ್ರಹ)

ನಾಟಕ

  • ವಿದ್ಯಾರಣ್ಯ ವಿಜಯ
  • ಜಾಕ್ ಕೇಡ್
  • ಮ್ಯಾಕ್

ಇಂಗ್ಲಿಷಿನಲ್ಲಿ

  1. Vedanta and Nationalism (1909)
  2. The Problems of Indian Native States (1917)
  3. The Native States in the Empire (1918)
  4. The Indian Native States and the Montagu-Chelmsford Report (1918)
  5. The Government of India and the Indian States, The Indian States Committee : A Note on its Terms of Reference and Their Implications (1928)
  6. All About Mysore (1931)
  7. The States and their People in the Indian Constitution (1931)

Related Articles

Leave a Reply

Your email address will not be published. Required fields are marked *

Back to top button