ರಾಜ್ಯಸುದ್ದಿ

ಎಲ್ಲರನ್ನೂ ಒಗ್ಗೂಡಿಸುವುದೇ ಸಂವಿಧಾನ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ

ಚಾಮರಾಜನಗರ: ಎಲ್ಲರನ್ನು ಒಗ್ಗೂಡಿಸುವುದೇ ಸಂವಿಧಾನ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ ಅವರು ತಿಳಿಸಿದರು.

ನಗರದ ಜೆ.ಎಚ್. ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಂವಿಧಾನ ದಿನಾಚರಣೆ ಪ್ರಯುಕ್ತ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,ಇಡೀ ಪ್ರಪಂಚದಲ್ಲೇ ಭಾರತ ಬಹುದೊಡ್ಡ ಪ್ರಜಾಪ್ರಭುತ್ವ ದೇಶವಾಗಿ ಹೊರಹೊಮ್ಮಲು ಕಾರಣವಾಗಿರುವುದು. ದೇಶದ ಪರಮೋಚ್ಛ ಗ್ರಂಥ ಸಂವಿಧಾನವಾಗಿದೆ. ಅಸ್ಪೃಶ್ಯತೆಯ ಬಗ್ಗೆ ತಿಳಿದ ಡಾ. ಬಿ.ಆರ್.ಅಂಬೇಡ್ಕರ್ ಅವರು ಮಾದರಿ ಸಂವಿಧಾನ ರಚಿಸುವ ಮೂಲಕ ಎಲ್ಲಾ ವರ್ಗಗಳಿಗೂ ಸಮಾನ ಅವಕಾಶ ಒದಗಿಸಿ ಸಮಾಜದಲ್ಲಿ ಉತ್ತಮ ಬದುಕು ನಡೆಸಲು ಅವಕಾಶ ಮಾಡಿಕೊಟ್ಟರು ದೇಶದಲ್ಲಿ ವಿವಿಧ ರೀತಿಯ ಧರ್ಮ, ಸಂಸ್ಕೃತಿ ಗಳಿದ್ದು, ಅವೆಲ್ಲವನ್ನು ಒಂದೇ ಚೌಕಟ್ಟಿನಡಿ ತರುವ ಕೆಲಸ ಸಂವಿಧಾನದಿಂದ ಮಾತ್ರ ಸಾಧ್ಯವಾಗಲಿದೆ. ಸಾಮಾಜಿಕ ಅಸಮಾನತೆಯಿಂದ ಕೂಡಿದ್ದ ಎಲ್ಲಾ ವರ್ಗಗಳಿಗೂ ಅವಕಾಶ, ಅನುಕೂಲ ಕಲ್ಪಿಸಲು ಸಂವಿಧಾನ ರಚನೆಯಂತ ಸಾಧನೆ ಮಾಡಿದ್ದಾರೆ. ದೇಶದ ಪ್ರತಿಯೊಬ್ಬರು ಸಂವಿಧಾನದ ಬಗ್ಗೆ ಹೆಚ್ಚಿನ ಅರಿವು ಹೊಂದಬೇಕು. ಸಂವಿಧಾನದ ಆಶಯಗಳನ್ನು ಈಡೇರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಂವಿಧಾನವನ್ನು ಗೌರವಿಸಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು,ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ಯೋಗಾನಂದ್,ಜಿ.ಪಂ.ನ ಶ್ರೀಕಂಠರಾಜೇ ಅರಸ್, ಉಪನ್ಯಾಸಕ ಮಹದೇವ್, ಕುಮಾರ್ ಗಾಯಕ ಸಿ.ಎಂ. ನರಸಿಂಹಮೂರ್ತಿ, ಸೇರಿದಂತೆ ಇತರರಿದ್ದರು.

ವರದಿ : :ಇರಸವಾಡಿ ಸಿದ್ದಪ್ಪಾಜಿ tv8kannada ಚಾಮರಾಜನಗರ

Related Articles

Leave a Reply

Your email address will not be published. Required fields are marked *

Back to top button