ರಾಜಕೀಯ

ಬಸನಗೌಡ ಯತ್ನಾಳ್ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿದ ಕೋರ್ಟ್!

ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದೆ.

ಜೈಲಿನಲ್ಲಿ ನನಗೆ ಅದನ್ನು ನಿರಾಕರಿಸಿದರೆ ನಾನು ಬದುಕುತ್ತಿರಲಿಲ್ಲ: ಕಹಿ ಘಟನೆ ಬಿಚ್ಚಿಟ್ಟ ಅರವಿಂದ್ ಕೇಜ್ರಿವಾಲ್!

ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ವಿಚಾರಣೆಗೆ ಗೈರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಜಾಮೀನು ರಹಿತ ವಾರಂಟ್‌ ಹೊರಡಿಸಿ ಆದೇಶಿಸಿದೆ.

ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ತಬಸ್ಸುಮ್ ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ಬೆಂಗಳೂರಿನ 42ನೇ ACMM ಕೋರ್ಟ್ ಜಡ್ಜ್ ಕೆ.ಎನ್.ಶಿವಕುಮಾರ್ ಅವರು ಇಂದು ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್‌ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

ದಿನೇಶ್‌ ಗುಂಡೂರಾವ್‌ ಪತ್ನಿ ತಬಸುಮ್‌ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್‌ 29 ರಂದು ಮಾನ್ಯ ಮಾಡಿದ್ದ ನ್ಯಾಯಾಲಯ, ಅಕ್ಟೋಬರ್‌ 16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಶಾಸಕ ಯತ್ನಾಳ್​ಗೆ ಸಮನ್ಸ್‌ ಜಾರಿಗೊಳಿಸಿತ್ತು.

ಆದ್ರೆ ಯತ್ನಾಳ್ ಇಂದು ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್‌ 28 ಕ್ಕೆ ಮುಂದೂಡಿದೆ.

ಈ ಮೂಲಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಾಕ್ ಎದುರಾಗಿದೆ..

ವರದಿ: ಮೊಹಮದ್ ಶಫಿ tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button