ಇತ್ತೀಚಿನ ಸುದ್ದಿ
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಕ್ರೀಡಾಕೂಟ

ಚಾಮರಾಜನಗರ: ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದ ಕ್ರೀಡಾ ಜ್ಯೋತಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೂತ್ ಚಾಲನೆ ನೀಡಿದರು.

ಅಗ್ರಹಾರ ಬೀದಿ, ರಥದ ಬೀದಿ, ದೊಡ್ಡ ಅಂಗಡಿ ಬೀದಿ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದ ವರೆಗೆ ಕ್ರೀಡಾ ಜ್ಯೋತಿ ಮೆರವಣಿಗೆ ಅದ್ದೂರಿಯಾಗಿ ಜರುಗಿತು.
ನಂತರ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ವಿಕಲಚೇತನರ ಜಿಲ್ಲಾ ಮಟ್ಟದ ಕ್ರೀಡಾಕೂಟ ಜರುಗಿತು