Breking news: ಯಲ್ಲಾಪುರದಲ್ಲಿ ‘ತರಕಾರಿ ಲಾರಿ’ ಪಲ್ಟಿ ಪ್ರಕರಣ : ಸಾವಿನ ಸಂಖ್ಯೆ 10 ಕ್ಕೇರಿಕೆ, 15 ಕ್ಕೂ ಹೆಚ್ಚು ಮಂದಿಗೆ ಗಾಯ.!

ಉತ್ತರ ಕನ್ನಡ: ತರಕಾರಿ ತುಂಬಿದ ಲಾರಿ ಪಲ್ಟಿಯಾಗಿ ಮೃತಪಟ್ಟವರ ಸಂಖ್ಯೆ 10 ಕ್ಕೆ ಏರಿಕೆಯಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಲ್ಲಿ ಪಲ್ಟಿಯಾಗಿ ಕಂದಕಕ್ಕೆ ಉರುಳಿ ಬಿದ್ದಿದೆ
ಅಪಘಾತದಲ್ಲಿ ಸಾವಿನ ಸಂಖ್ಯೆ 10 ಕ್ಕೆ ಏರಿಕೆಯಾಗಿದ್ದು, 15 ಕ್ಕೂ ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.ತರಕಾರಿ ತುಂಬಿದ್ದ ಲಾರಿಯಲ್ಲಿ 25 ಜನ ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಭಾಗದವರು ಎಂದು ತಿಳಿದು ಬಂದಿದೆ. ಸವಣೂರಿನಿಂದ ಕುಮಟಾಗೆ ಲಾರಿ ತೆರಳುತ್ತಿದ್ದಾಗ ದಟ್ಟ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಕ್ರೇನ್ ಮೂಲಕ ಶವಗಳನ್ನು ಹೊರೆತೆಗೆಯಲಾಗಿದ್ದು, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.