ರಾಜ್ಯ

ಬೆಂಗಳೂರು ಗಣರಾಜ್ಯೋತ್ಸವ ಸಂಭ್ರಮ: ನಗರದ ಈ ರಸ್ತೆಗಳು ಬಂದ್​, ಮಾರ್ಗ ಬದಲಾವಣೆ 

ರಾಜಧಾನಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವಕ್ಕೆ ಕಬ್ಬನ್​​ ರಸ್ತೆಯಲ್ಲಿರುವ ಮಾಣಿಕ್ ಷಾ ಪರೇಡ್​ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ 8:30 ಗಂಟೆಯಿಂದ 10:30ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

ಎಲ್ಲಿಎಲ್ಲಿ ಸಂಚಾರ ನಿರ್ಬಂಧ

ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ ಫೆಂಟ್ರಿ ರಸ್ತೆ- ಸಫೀನಾ ಪ್ಲಾಜಾಕಡೆ ಎಡ ತಿರುವು ಪಡೆದು ಮೈನ್​ಗಾರ್ಡ್​ ರಸ್ತೆ – ಆಲೀಸ್​ ಸರ್ಕಲ್​- ಡಿಸ್ಪೆನ್ಸರಿ ರಸ್ತೆ – ಕಾಮರಾಜ ರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ – ಕಬ್ಬನ್ ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬಹುದಾಗಿದೆ.

ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಭಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕ್ಷನ್ ಬಳಿ ಬಲ ತಿರುವು ಪಡೆದು ಎಂ.ಜಿ.ರಸ್ತೆಯ ಮುಖಾಂತರ ಮೆಯೋಹಾಲ್, ಕಾವೇರಿ ಎಂಪೋರಿಯಂ, ಅನಿಲ್ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

ಕಾರ್ಯಕ್ರಮಕ್ಕೆ ಬರುವವರಿಗೆ ಸೂಚನೆ

ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಪಾಸ್​ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡುವಂತೆ ಕೋರಲಾಗಿದೆ.

ತುರ್ತು ಸೇವಾ ವಾಹನಗಳಾದ ಆಂಬುಲೆನ್ಸ್, ಅಗ್ನಿ ಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್, ಕೆ.ಎಸ್.ಆರ್.ಪಿ. ಸಿ.ಆರ್.ಟಿ., ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

Related Articles

Leave a Reply

Your email address will not be published. Required fields are marked *

Back to top button