ರಾಜಕೀಯ

ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ : ಶಾಸಕ ಎಸ್.ಟಿ ಸೋಮಶೇಖ‌ರ್ ಭವಿಷ್ಯ.

ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿರುವ సిపి ಯೋಗೇಶ್ವ‌ರ್ ಬೆನ್ನಲ್ಲೇ ಇನ್ನೂ 8 ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಟಿ ಸೋಮಶೇಖರ್ ಇಂದು ಖಾಸಗಿ ವಾಹಿನಿ ಜೊತೆ ಮಾತನಾಡಿದ್ದು, ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಅದಕ್ಕೆ ನಾನು ನಿರಂತರವಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡುತ್ತೇನೆ. ಸಿಪಿ ಯೋಗೇಶ್ವರ್ ರಿಂದ ಚೆನ್ನಾಗಿ ಕೆಲಸ ಮಾಡಿಸಿಕೊಂಡು ಈಗ ಕೈ ಬಿಟ್ಟರು ಎಂದು ಸ್ವಪಕ್ಷದ ವಿರುದ್ಧವೇ ಗುಡುಗಿದರು. م و

ಬಿಜೆಪಿಯ 8 ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ನನ್ನ ಮೇಲೆ

ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ಅಶೋಕ್ ಮಾತಿಗೆ ಬೆಲೆ ಕೊಡಬಾರದು. ಸದ್ಯದಲ್ಲಿ ನೋಡುತ್ತಿರಿ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಕೆಲ ಬೆಳವಣಿಗೆಗಳಿಂದ ಅನೇಕ ನಾಯಕರು ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡೆಗೆ ಬೇಸರಗೊಂಡಿರುವ ಸೋಮಶೇಖರ್ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದಾರೆ.

ವರದಿ : ಪೂರ್ಣಿಮಾ ಪವಾರ್ ಸಂಪಾದಕರು tv8kannada ಬೆಂಗಳೂರು

Related Articles

Leave a Reply

Your email address will not be published. Required fields are marked *

Back to top button