ನಟ ದರ್ಶನ್ ಇದೀಗ ಸರ್ಜರಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಮಾಜಿ ಸಂಸದೆ ಸುಮಲತಾ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ಐದು ತಿಂಗಳುಗಳ ಕಾಲ ಜೈಲು ಸೆರೆವಾಸ ಅನುಭವಿಸಿ ಇತ್ತೀಚಿಗಷ್ಟೇ ಷರತ್ತು ಬದ್ಧ ಮಧ್ಯಂತರ ಜಾಮೀನಿನಿಂದ ಹೊರಬಂದಿರುವ ನಟ ದರ್ಶನ್ ಅವರು ಈಗಾಗಲೇ ಆಸ್ಪತ್ರೆಗೆ ದಾಖಲಾಗಿದ್ದು, ಶಸ್ತ್ರಚಿಕಿತ್ಸೆ ಬಗ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಬೆನ್ನು ನೋವು ಕಾಣಿಸಿಕೊಂಡಿರುವ ನಟ ದರ್ಶನ್ ಅವರು ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆನ್ನು ನೋವು ಇರುವ ಕಾರಣದಿಂದಲೇ ನಟ ದರ್ಶನವರು ಜೈಲಿನಿಂದ ಹೊರ ಬಂದಿದ್ದಾರೆ ಆದರೆ ಅವರಿಗೆ ಸರ್ಜರಿ ಮಾಡಿಸಿಕೊಳ್ಳಲು ಇಷ್ಟ ಇಲ್ಲ ಎಂದು ಹೇಳಿದ್ದಾರೆ.
ಸರ್ಜರಿ ಮಾಡಿದರೆ ಬಹಳ ದಿನ ವಿಶ್ರಾಂತಿ ತೆಗೆದುಕೊಳ್ಳಬೇಕಾಗುತ್ತದೆ ಹಾಗಾಗಿ ಸರ್ಜರಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ. ಈಗಾಗಲೇ ಅರ್ಧದಲ್ಲಿ ನಿಂತಿರುವ ಶೂಟಿಂಗ್ಗಳನ್ನು ಮತ್ತೆ ಮುಂದೂಡಬೇಕಾಗುತ್ತದೆ ಹಾಗಾಗಿ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಲು ಸ್ವಲ್ಪ ಹಿಂದೆಟು ಹಾಕುತ್ತಿದ್ದಾರೆ.
ನೋವು ತುಂಬಾ ಇದೆ. ಆದರೆ ಸರ್ಜರಿ ಅವರಿಗೆ ಇಷ್ಟ ಇಲ್ಲ ಅಂತ ನಾನು ಕೇಲ್ಪಟ್ಟೆ. ಯಾಕೆಂದರೆ, ಸರ್ಜರಿ ಮಾಡಿದರೆ ರಿಕವರಿ ಸಮಯ ತುಂಬ ಇರುತ್ತೆ. ಶೂಟಿಂಗ್ ಅರ್ಧಕ್ಕೆ ನಿಂತಿದೆ. ಇದು ಸಿನಿಮಾ ಇಂಡಸ್ಟ್ರಿ ನಷ್ಟ ಎದುರಿಸುತ್ತಿರುವ ಸಂದರ್ಭ.
ಹೆಚ್ಚಿನ ಮಾಹಿತಿ ಇಲ್ಲ. ದರ್ಶನ್ ಕೈಯಲ್ಲಿ ಫೋನ್ ಇಲ್ಲ. ಅವರ ಪತ್ನಿ ಜೊತೆ ನಾವು ಸಂಪರ್ಕ ಮಾಡಬೇಕು ಅಷ್ಟೇ’ ಎಂದು ಸುಮಲತಾ ಅಂಬರೀಷ್ ಅವರು ಹೇಳಿದ್ದಾರೆ.
ದರ್ಶನ್ ಶಸ್ತ್ರ ಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ:
ಕೇವಲ ಔಷಧಿಗಳ ಮೂಲಕ ಬೆನ್ನು ನೋವಿಗೆ ಚಿಕಿತ್ಸೆ ಕೊಟ್ಟರೆ ಉತ್ತಮವಾಗುತ್ತದೆ ಶಸ್ತ್ರ ಚಿಕಿತ್ಸೆ ಮಾಡಿಸಿದರೆ ತುಂಬಾ ವಿಶ್ರಾಂತಿ ಪಡೆಯಬೇಕಾಗುತ್ತದೆ ಹಾಗಾಗಿ ನಟ ದರ್ಶನ್ ಅವರು ಇದೀಗ ಸರ್ಜರಿ ಮಾಡಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸಂಸದೆ ಸುಮಲತಾ ಅವರು ತಿಳಿಸಿದರು.
ವರದಿ : ಪುಣ್ಯ